ಬೆಂಗಳೂರು: ಲಾಲ್‍ಬಾಗ್‍ನಲ್ಲಿ ನಾಳೆಯಿಂದ ಫಲಪುಷ್ಪ ಪ್ರದರ್ಶನ, ನಟ ಪುನೀತ್ ಈ ಬಾರಿಯ ಆಕರ್ಷಣೆ
ಬೆಂಗಳೂರು, ಆ.4: ತೋಟಗಾರಿಕೆ ಇಲಾಖೆ ಹಾಗೂ ಮೈಸೂರು ಉದ್ಯಾನ ಕಲಾ ಸಂಘ ಸಹಯೋಗದಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಲಾಲ್‍ಬಾಗ್‍ನಲ್ಲಿ ಆ.5 ರಿಂದ ಆ.15ರವರೆಗೆ ಫಲಪುಷ್ಪ ಪ್ರದರ್ಶನ ಮಾಡಲಾಗಿದೆ.
ಕೋವಿಡ್ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ಫಲಪುಷ್ಪ ಪ್ರದರ್ಶನವನ್ನು ಸ್ಥಗಿತಗೊಳಿಸಲಾಗಿತ್ತು. ಕಳೆದ ಬಾರಿ ಘೋಷಿಸಿದಂತೆ ರಾಜ್‍ಕುಮಾರ್ ಹಾಗೂ ಪುನೀತ್ ರಾಜ್‍ಕುಮಾರ್, ಕುರಿತಾದ ಫಲಪುಷ್ಪ ಪ್ರದರ್ಶನವನ್ನು ನಡೆಸಲಾಗುತ್ತಿದೆ.ಆ.5ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಅವರು ಆ.5ರಂದು ಬೆಳಗ್ಗೆ 11 ಗಂಟೆಗೆ ಗಾಜಿನ ಮನೆಯಲ್ಲಿ ಪ್ರದರ್ಶನಕ್ಕೆ ಚಾಲನೆ ನೀಡುವರು.
ಫಲಪುಷ್ಪ ಪ್ರದರ್ಶನಕ್ಕೆ 2.50 ಕೋಟಿಖರ್ಚು ಮಾಡುತ್ತಿದ್ದು, ಸುಮಾರು 15 ಲಕ್ಷ ಮಂದಿ ವೀಕ್ಷಕರು ಬರುವ ಸಾಧ್ಯತೆಯಿದೆ.350 ಮಂದಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ. ಹೋಂ ಗಾಡ್ರ್ಸ್, ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 500 ಮಂದಿಯಿಂದ ಭದ್ರತೆ ವ್ಯವಸ್ಥೆ ಮಾಡಲಾಗಿದೆ.
ನಾಳೆ (ಆ.6) ಮಧ್ಯಾಹ್ನ 1 ಗಂಟೆಗೆ ಇಕೆಬಾನ ತರಕಾರಿ ಕೆತ್ತನೆ ಥಾಯ್‍ಆರ್ಟ್ ಹಾಗೂ ಬೋನ್ಸಾಯ್ ಗಿಡಗಳ ಪ್ರದರ್ಶನವನ್ನುಖ್ಯಾತ ನಟಿತಾರಾಅನುರಾಧಅವರು ಲಾಲ್‍ಬಾಗ್‍ನ ಡಾ.ಎಂ.ಎಚ್.ಮರಿಗೌಡ ಸ್ಮಾರಕ ಭವನದಲ್ಲಿಉದ್ಘಾಟಿಸಲಿದ್ದಾರೆ.
ಪಾರ್ಕಿಂಗ್ ವ್ಯವಸ್ಥೆ: ಶಾಂತಿನಗರ ಬಸ್ ನಿಲ್ದಾಣದಲ್ಲಿರುವ ಬಹುಮಹಡಿ ವಾಹನ ನಿಲುಗಡೆ, ಜೆ.ಸಿ.ರಸ್ತೆಯ ಬಿಬಿಎಂಪಿ ಪಾಲಿಕೆಯ ಬಹುಮಹಡಿ ವಾಹನ ನಿಲ್ದಾಣದಲ್ಲಿ ಕಾರುಗಳು ಹಾಗೂ ಆಲ್‍ಅಮೀನ್‍ಕಾಲೇಜಿನ ಮೈದಾನ ಮತ್ತು ವಿಲ್ಸನ್‍ಗಾರ್ಡನ್‍ನಲ್ಲಿರುವ ಹೊಂಬೇಗೌಡಕ್ರೀಡಾಂಗಣದಲ್ಲಿ ದ್ವಿಚಕ್ರ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.