ಕ್ರಷರ್ ನಿಯಮ ಸಡಿಲಿಕೆ; ಸಚಿವರೊಂದಿಗೆ ಶಾಸಕ ವೇದವ್ಯಾಸ್ ಕಾಮತ್ ಚರ್ಚೆ
Update: 2022-08-04 22:39 IST
ಮಂಗಳೂರು : ಕಟ್ಟಡ ನಿರ್ಮಾಣಕ್ಕೆ ಬಳಸುವ ಮತ್ತು ಕ್ರಷರ್ ನಿಯಮಗಳನ್ನು ಸರಳೀಕರಣಗೊಳಿಸುವ ಕುರಿತು ರಾಜ್ಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವ ಆಚಾರ್ ಹಾಲಪ್ಪಬಸಪ್ಪಅವರ ಜೊತೆ ಶಾಸಕ ವೇದವ್ಯಾಸ್ ಕಾಮತ್ ಸಭೆ ನಡೆಸಿದರು.
ಕ್ರಷರ್ ಹಾಗೂ ಬಿಲ್ಡಿಂಗ್ ಸ್ಟೋನ್‌ಗಳ ಲಭ್ಯತೆಯ ಕುರಿತ ನಿಯಮಾವಳಿಗಳನ್ನು ಸರಳೀಕರಣಗೊಳಿಸಿ ಸಚಿವ ಸಂಪುಟಕ್ಕೆ ಶಿಫಾರಸು ಮಾಡುವ ಬಗ್ಗೆ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ನಿರ್ದೇಶಕ ರಮೇಶ್ ಟಿ.ಎಸ್, ಜಂಟಿ ನಿರ್ದೇಶಕಿ ಲಕ್ಷ್ಮಮ್ಮ, ರಾಜ್ಯ ಕ್ವಾರಿ ಮಾಲಕರ ಸಂಘದ ಅಧ್ಯಕ್ಷ ರವೀಂದ್ರ ಶೆಟ್ಟಿ ಕಾರ್ಕಳ, ದ.ಕ. ಮತ್ತು ಉಡುಪಿ ಜಿಲ್ಲಾ ಕ್ವಾರಿ ಮಾಲಕರ ಸಂಘದ ಅಧ್ಯಕ್ಷ ಮನೋಜ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.