ಸಂಪಾಜೆಯ ಮಾರ್ಪಡ್ಕ- ಊರುಬೈಲು ಸಂಪರ್ಕ ಸೇತುವೆ ನೀರುಪಾಲು

Update: 2022-08-04 17:20 GMT

ಸಂಪಾಜೆ: ಮಾರ್ಪಡ್ಕ ಮೂಲಕ ಊರುಬೈಲಿಗೆ ಸಂಪರ್ಕ ಕಲ್ಪಿಸುವ ಮಾರ್ಪಡ್ಕ ಸೇತುವೆಯು ಬುಧವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಕುಸಿದು ನೀರು ಪಾಲಾಗಿದೆ. ಸೇತುವೆ ಕುಸಿತದಿಂದ ಊರುಬೈಲಿನ ಸುಮಾರು ಇನ್ನೂರಕ್ಕೂ ಹೆಚ್ಚು ಕುಟುಂಬಗಳ ಸಂಪರ್ಕ ಕಡಿತಗೊಂಡಿದೆ.

ಸಂಪಾಜೆಯಿಂದ ಮಾರ್ಪಡ್ಕ ದಾರಿಯಾಗಿ ಚೆಂಬು ಗ್ರಾಮದ ಊರುಬೈಲಿಗೆ ಸಂಪರ್ಕ ಕಲ್ಪಿಸುವ ಈ ಸೇತುವೆಯನ್ನು ಕಳೆದ ಮೂರು ವರ್ಷಗಳ ಹಿಂದಷ್ಟೇ ನಿರ್ಮಾಣ ಮಾಡಲಾಗಿತ್ತು.

ಅರಂತೋಡು ಗ್ರಾಮದ ಬೆದ್ರುಪಣೆಯಲ್ಲಿನ ಸೇತುವೆಯ ಒಂದು ಬದಿಯ ತಡೆಗೋಡೆ ಮತ್ತು ಮಣ್ಣು ನೀರಿನಲ್ಲಿ ಕೊಚ್ಚಿ ಹೋಗಿ ಸಂಪರ್ಕ ಕಡಿತಗೊಂಡಿದೆ. ಇದರಿಂದಾಗಿ ಹೊಳೆಯ ಇನ್ನೊಂದು ಬದಿಯ ಹಲವಾರು ಕುಟುಂಬಗಳು ಸಂಪರ್ಕವನ್ನೇ ಕಡಿದುಕೊಂಡಿವೆ. ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಹೊಳೆ ದಾಟಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ರಾಮಸ್ಥರ ಸಮಸ್ಯೆಗೆ ಸ್ಪಂದಿಸಿದ ಅಡ್ತಲೆಯ ನಾಗರಿಕ ಹಿತರಕ್ಷಣಾ ವೇದಿಕೆಯ ಸದಸ್ಯರು ಸ್ಥಳಕ್ಕೆ ತೆರಳಿ ಸ್ಥಳೀಯರ ನೆರವಿನೊಂದಿಗೆ ಅಡಿಕೆ ಮರದ ಪಾಲ ನಿರ್ಮಿಸಿ ತಾತ್ಕಾಲಿಕ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News