ನೀಲೇಶ್ವರ | 2 ಕೆಜಿ ಗಾಂಜಾ ಸಹಿತ ಇಬ್ಬರು ಆರೋಪಿಗಳ ಸೆರೆ

Update: 2022-08-05 07:02 GMT

ಕಾಸರಗೋಡು, ಆ.5: ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಎರಡು ಕಿಲೋ ಗಾಂಜಾ(Ganja) ಹಾಗೂ 25 ಗ್ರಾಂ ಎಂಡಿಎಂಎ(MDM) ಮಾದಕ ವಸ್ತು ಸಹಿತ ಇಬ್ಬರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೈಭವ್ ಸಕ್ಸೇನಾ ನೇತೃತ್ವದ ವಿಶೇಷ ತಂಡ ಬಂಧಿಸಿದೆ. ಸಾಗಾಟಕ್ಕೆ ಬಳಸಿದ್ದ ಕಾರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಣ್ಣೂರು ಮಾಡಾಯಿ ನಿವಾಸಿ ನಿಝಾಮ್ (32) ಮತ್ತು ಮುಹಮ್ಮದ್ ತ್ವಾಹಾ(20) ಬಂಧಿತ ಆರೋಪಿಗಳಾಗಿದ್ದಾರೆ.

ಇದನ್ನೂ ಓದಿ: ಯಾದಗಿರಿ | ಭೀಕರ ರಸ್ತೆ ಅಪಘಾತಕ್ಕೆ ಒಂದೇ ಕುಟುಂಬದ ಆರು ಮಂದಿ ಬಲಿ

ನೀಲೇಶ್ವರ ಪಳ್ಳಿಕೆರೆಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಮಾದಕ ವಸ್ತು ಸಾಗಾಟ ಪತ್ತೆಯಾಗಿದೆ. ಕಾರಿನಲಿದ್ದವರ ಅನುಮಾನಾಸ್ಪದ ಚಲನವಲನ ಗಮನಿಸಿದ ಪೊಲೀಸರು ತಪಾಸಣೆ ನಡೆಸಿದ್ದರಿಂದ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News