×
Ad

ಪುಣೆ ಫಿಲ್ಮ್ ಇನ್‌ಸ್ಟಿಟ್ಯೂಟ್ ವಿದ್ಯಾರ್ಥಿ ಹಾಸ್ಟೆಲ್‌ನಲ್ಲಿ ಶವವಾಗಿ ಪತ್ತೆ, ಆತ್ಮಹತ್ಯೆ ಶಂಕೆ

Update: 2022-08-05 13:40 IST
Photo:PTI

ಪುಣೆ: ಇಲ್ಲಿನ ಫಿಲ್ಮ್ ಆ್ಯಂಡ್ ಟೆಲಿವಿಷನ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ (ಎಫ್‌ಟಿಐಐ) 32 ವರ್ಷದ ವಿದ್ಯಾರ್ಥಿಯೊಬ್ಬರ ಶವ ಶುಕ್ರವಾರ ಅವರ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದು ಆತ್ಮಹತ್ಯೆ ಎಂದು ಪೊಲೀಸರು ಶಂಕಿಸಿದ್ದು, ಇದುವರೆಗೆ ಯಾವುದೇ ಸೂಸೈಡ್ ನೋಟ್ ಪತ್ತೆಯಾಗಿಲ್ಲ.

"ಅಶ್ವಿನ್ ಅನುರಾಗ್ ಶುಕ್ಲಾ ಎಂದು ಗುರುತಿಸಲಾದ ವಿದ್ಯಾರ್ಥಿ ಇಂದು ಬೆಳಿಗ್ಗೆ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ದೇಹವು ಕೊಳೆತ ಸ್ಥಿತಿಯಲ್ಲಿತ್ತು" ಎಂದು ಡೆಕ್ಕನ್ ಜಿಮ್ಖಾನಾ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಮುರಳೀಧರ್ ಕರ್ಪೆ ತಿಳಿಸಿದ್ದಾರೆ.

"ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಪ್ರಕರಣವಾಗಿದೆ. ಆದರೆ ಇದುವರೆಗೆ ಯಾವುದೇ ಸೂಸೈಡ್ ನೋಟ್ ಪತ್ತೆಯಾಗಿಲ್ಲ ಹಾಗೂ  ನಮ್ಮ ತನಿಖೆ ಮುಂದುವರೆದಿದೆ" ಎಂದು ಇನ್ಸ್‌ಪೆಕ್ಟರ್ ಹೇಳಿದರು.

ಶುಕ್ಲಾ ಅವರು 2017 ರ ಬ್ಯಾಚ್ ನ  ಸಿನಿಮಾಟೋಗ್ರಫಿ ಕೋರ್ಸ್‌ನ ವಿದ್ಯಾರ್ಥಿಯಾಗಿದ್ದರು ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News