130 ಪ್ರಕರಣಗಳಲ್ಲಿ ಪೋಸ್ಟ್ ತೆಗೆದುಹಾಕುವಂತೆ ಸಾಮಾಜಿಕ ಜಾಲತಾಣ ಕಂಪೆನಿಗಳಿಗೆ ಸೂಚಿಸಿದ್ದ ಚುನಾವಣಾ ಆಯೋಗ

Update: 2022-08-05 09:51 GMT
ಕೇಂದ್ರ ಕಾನೂನು ಸಚಿವ ಕಿರೆಣ್ ರಿಜಿಜು (PTI)

ಹೊಸದಿಲ್ಲಿ: ದೇಶದಲ್ಲಿ 2019ರಲ್ಲಿ ನಡೆದ ಲೋಕಸಭಾ ಚುನಾವಣೆಗಳ ನಂತರದಿಂದ ಇಲ್ಲಿಯ ತನಕ 130 ದ್ವೇಷಕಾರಕ ಪೋಸ್ಟ್ ಗಳನ್ನು ತೆಗೆದುಹಾಕುವಂತೆ ಚುನಾವಣಾ ಆಯೋಗವು ಸಾಮಾಜಿಕ ಜಾಲತಾಣ ಕಂಪೆನಿಗಳಿಗೆ ಸೂಚಿಸಿದೆ ಎಂದು ಕೇಂದ್ರ ಕಾನೂನು ಸಚಿವ ಕಿರೆಣ್ ರಿಜಿಜು ರಾಜ್ಯಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಇಂತಹ ಯಾವುದೇ ಪ್ರಕರಣಗಳು ಜಾರ್ಖಂಡ್ ಮತ್ತು ಬಿಹಾರದಲ್ಲಿ ಕ್ರಮವಾಗಿ 2019 ಮತ್ತು 2020 ರಲ್ಲಿ ನಡೆದ ಚುನಾವಣೆ ವೇಳೆ ದಾಖಲಾಗಿರದೇ ಇದ್ದರೂ ಕಳೆದ ಲೋಕಸಭಾ ಚುನಾವಣೆ ವೇಳೆ 58 ಪ್ರಕರಣಗಳು ದಾಖಲಾಗಿದ್ದವು ಎಂದು ಅವರು ತಿಳಿಸಿದರು.

ದಿಲ್ಲಿಯಲ್ಲಿ 2020 ರಲ್ಲಿ ನಡೆದ ವಿಧಾನಸಭಾ ಚುನಾವಣೆಗಳ ವೇಳೆ 34 ಪ್ರಕರಣಗಳು, 2021 ರಲ್ಲಿ ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚ್ಚೇರಿಯಲ್ಲಿ ನಡೆದ ಚುನಾವಣೆಗಳ ವೇಳೆ 29 ಪ್ರಕರಣಗಳು ದಾಖಲಾಗಿದ್ದವು. ಮಹಾರಾಷ್ಟ್ರ ಮತ್ತು ಹರ್ಯಾಣದಲ್ಲಿ 2019ರಲ್ಲಿ ನಡೆದ ಚುನಾವಣೆ ವೇಳೆ ಕೇವಲ ಒಂದು ಪ್ರಕರಣ ದಾಖಲಾಗಿದ್ದರೆ ಈ ವರ್ಷ ಗೋವಾ, ಮಣಿಪುರ, ಪಂಜಾಬ್, ಉತ್ತರಾಖಂಡ ಮತ್ತು ಉತ್ತರ ಪ್ರದೇಶ ಚುನಾವಣೆಗಳ ವೇಳೆ 8 ಪ್ರಕರಣಗಳು ದಾಖಲಾಗಿದ್ದವು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News