×
Ad

ದುರಂತ ನಾಯಕ ಖರ್ಗೆಗಾಗಿ ಕಾಂಗ್ರೆಸ್ ನಲ್ಲಿ ದುಃಖಿಸುವವರೇ ಇಲ್ಲ: ಬಿಜೆಪಿ ಕುಹಕ

Update: 2022-08-05 16:15 IST

ಬೆಂಗಳೂರು, ಆ.5: ನಕಲಿ ಗಾಂಧಿಗಳು ತನಿಖಾ ಸಂಸ್ಥೆಯ ಎದುರು ವಿಚಾರಣೆಗೆ ಹಾಜರಾದಾಗ ಕಾಂಗ್ರೆಸ್‌ ಪಕ್ಷ ಆಕಾಶ ಭೂಮಿ ಒಂದಾಗುವಂತೆ ಪ್ರತಿಭಟಿಸಿತು. ಆದರೆ ಈಗ ದಲಿತ ನಾಯಕ, ಕಾಂಗ್ರೆಸ್‌ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಜಾರಿ ನಿರ್ದೇಶನಾಲಯ(ಈ.ಡಿ.)ದ ಎದುರು ಕುಳಿತಾಗ ಕಾಂಗ್ರೆಸ್‌ ದಿವ್ಯ ಮೌನ ಅನುಸರಿಸುತ್ತಿದೆ. ಏಕೆ ಈ ದ್ವಂದ್ವ ನೀತಿ ಎಂದು ರಾಜ್ಯ ಬಿಜೆಪಿ ಪ್ರಶ್ನಿಸಿದೆ.

ನ್ಯಾಶನಲ್ ಹೆರಾಲ್ಡ್ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಮಲ್ಲಿಕಾರ್ಜುನ ಖರ್ಗೆಯವರನ್ನು ಈ.ಡಿ. ವಿಚಾರಣೆ ನಡೆಸಿದ್ದು, ಈ ವಿಚಾರವಾಗಿ ಬಿಜೆಪಿಯು ಟ್ವೀಟ್ (BJP Karnataka) ಮೂಲಕ ಕಾಂಗ್ರೆಸ್ ಅನ್ನು ಟೀಕಿಸಿದೆ.

ಕೇಂದ್ರ ಬಿಜೆಪಿ ನಾಯಕರ ಓಲೈಕೆಗಾಗಿ ರಾಜ್ಯ ಸರಕಾರದಿಂದ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅವಮಾನ: ಸಿದ್ದರಾಮಯ್ಯ

ಸಿದ್ದರಾಮಯ್ಯ, ಡಿಕೆಶಿ ಆದಿಯಾಗಿ ಕಾಂಗ್ರೆಸ್‌ ನಾಯಕರೆಲ್ಲರೂ 75ರ ಈ ಇಳಿ ಹರೆಯದಲ್ಲೂ ಸೋನಿಯಾ ಗಾಂಧಿ ಈ.ಡಿ. ವಿಚಾರಣೆಯ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಮರುಕಪಟ್ಟರು. ದುರಂತ ನಾಯಕ ಖರ್ಗೆ 80 ವರ್ಷ ದಾಟಿದ್ದಾರೆ, ದುಃಖಿಸುವವರೇ ಇಲ್ಲ! ದಲಿತ ಎಂಬ ಕಾರಣಕ್ಕಾಗಿ ಇಷ್ಟೊಂದು ನಿಕೃಷ್ಟವೇ?

ಸೋನಿಯಾ ಗಾಂಧಿ ಅವರನ್ನು ಈಡಿ.. ವಿಚಾರಣೆ ನಡೆಸುವ ಕಾರಣದಿಂದ ಮಲ್ಲಿಕಾರ್ಜುನ ಖರ್ಗೆ ತಮ್ಮ 80 ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲಿಲ್ಲ. ನಕಲಿ ಗಾಂಧಿ ಕುಟುಂಬಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡುತ್ತಿರುವ ದಲಿತ ನಾಯಕ ಖರ್ಗೆ ಅವರನ್ನು ತನಿಖೆ ನಡೆಸುತ್ತಿರುವಾಗ ಕಾಂಗ್ರೆಸ್‌ ಪಕ್ಷ ಮೌನವಾಗಿದೆ. ಏಕೆ ಈ ತಾರತಮ್ಯ? ಎಂದು ಬಿಜೆಪಿ ಪ್ರಶ್ನಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News