×
Ad

ಮೈಸೂರು ವಲಯ ಮಟ್ಟದ ಟೇಬಲ್ ಟೆನ್ನಿಸ್ ಕ್ರಿಡಾಕೂಟ: ಶಿವಮೊಗ್ಗ- ಸುಳ್ಯ ತಂಡಕ್ಕೆ ಪ್ರಶಸ್ತಿ

Update: 2022-08-05 17:04 IST

ಉಡುಪಿ, ಆ.5: ಉಡುಪಿಯ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯು ರ್ವೇದ ಕಾಲೇಜಿನಲ್ಲಿ ಇತ್ತೀಚೆಗೆ ಏರ್ಪಡಿ ಸಲಾದ ರಾಜೀವ್ ಗಾಂಧಿ ವಿಶ್ವವಿದ್ಯಾ ಲಯದ ಮೈಸೂರು ವಲಯ ಮಟ್ಟದ ಟೇಬಲ್ ಟೆನ್ನಿಸ್ ಕ್ರೀಡಾಕೂಟದ ಪುರುಷರ ವಿಭಾಗದಲ್ಲಿ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಮಹಿಳೆಯರ ವಿಭಾಗದಲ್ಲಿ ಸುಳ್ಯ ಕೆವಿಜಿ ಡೆಂಟಲ್ ಕಾಲೇಜು ಪ್ರಶಸ್ತಿ ಗೆದ್ದುಕೊಂಡಿತು.

ಪುರುಷರ ವಿಭಾಗದಲ್ಲಿ ಮೈಸೂರು ವೈದ್ಯಕೀಯ ಕಾಲೇಜು ಹಾಗೂ ಮಹಿಳೆಯರ ವಿಭಾಗದಲ್ಲಿ ಉಡುಪಿ ಎಸ್.ಡಿ.ಎಂ. ಆಯುರ್ವೇದ ಕಾಲೇಜು ರನ್ನರ್ಸ್‌ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಸಮಾರೋಪ ಸಮಾರಂಭದಲ್ಲಿ ಎಸ್.ಡಿ.ಎಂ. ಆಯುರ್ವೇದ ಕಾಲೇಜಿನ ಪ್ರಾಂಶುಪಾಲೆ ಡಾ.ಮಮತಾ ಕೆ.ವಿ. ಬಹುಮಾನ ವಿತರಿಸಿದರು.

ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಡುಪಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲೆ ಡಾ.ಮಮತಾ ಕೆ.ವಿ., ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಸುರೇಶ್, ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ನಾಗರಾಜ್ ಎಸ್., ಎಸ್.ಡಿ.ಎಂ. ಆಯುರ್ವೇದ ಕಾಲೇಜಿನ ಸ್ನಾತಕೋತ್ತರ ಹಾಗೂ ಪಿ.ಎಚ್.ಡಿ ಅಧ್ಯಯನದ ಡೀನ್ ಡಾ.ನಿರಂಜನ್ ರಾವ್, ವಿದ್ಯಾರ್ಥಿ ಕಲ್ಯಾಣ ವಿಭಾಗದ ಡೀನ್ ಡಾ. ವೀರಕುಮಾರ ಕೆ., ಕಾಲೇಜಿನ ಕ್ರೀಡಾ ಇಲಾಖೆಯ ಮುಖ್ಯಸ್ಥ ಡಾ.ಪೃಥ್ವಿರಾಜ್ ಪುರಾಣಿಕ್, ದೈಹಿಕ ಶಿಕ್ಷಣ ನಿರ್ದೇಶಕ ಆದರ್ಶ್ ಬಿ. ಶೆಟ್ಟಿ ಉಪಸ್ಥಿತರಿದ್ದರು.

ಸಹಪ್ರಾಧ್ಯಾಪಕ ಡಾ.ಸಂದೇಶ್ ಕುಮಾರ್ ಶೆಟ್ಟಿ ವಂದಿಸಿದರು. ಲಾವಣ್ಯ ಕಾರ್ಯಕ್ರಮ ನಿರೂಪಿಸಿದರು.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News