ಬಡಗಬೆಟ್ಟು ಸೊಸೈಟಿಗೆ ಅತ್ಯುತ್ತಮ ಸಾಧನಾ ಪ್ರಶಸ್ತಿ

Update: 2022-08-05 14:03 GMT

ಉಡುಪಿ, ಆ. 5: ಉಡುಪಿಯ ಪ್ರತಿಷ್ಠಿತ ಸಹಕಾರಿ ಸಂಸ್ಥೆ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಆ.5ರಂದು ಜರಗಿದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಸತತವಾಗಿ ೧೬ನೇ ಬಾರಿಗೆ ಅವಿಭಜಿತ ದ.ಕ.ಜಿಲ್ಲೆಯಲ್ಲಿ ಸಂಸ್ಥೆಯು ಸಾಧಿಸಿದ ಸರ್ವತೋಮುಖ ಅಭಿವೃದ್ಧಿ ಗಾಗಿ ಸಾಧನಾ ಪ್ರಶಸ್ತಿ 2021-22ನ್ನು ಪ್ರದಾನ ಮಾಡಲಾಯಿತು.

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಬ್ಯಾಂಕಿನ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಬಿ. ಹಾಗೂ ಬ್ಯಾಂಕಿನ ನಿರ್ದೇಶಕರ ಉಪಸ್ಥಿತಿಯಲ್ಲಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸಾಟಿಯ ಅಧ್ಯಕ್ಷ ಸಂಜೀವ ಕಾಂಚನ್, ಉಪಾಧ್ಯಕ್ಷ ಎಲ್.ಉಮಾನಾಥ್, ನಿರ್ದೇಶಕರಾದ ವಿನಯ ಕುಮಾರ್ ಟಿ.ಎ., ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ.ಶೇರಿಗಾರ್ ಪ್ರಶಸ್ತಿಯನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರು ಜಯಕರ ಶೆಟ್ಟಿ ಇಂದ್ರಾಳಿ ಉಪಸ್ಥಿತರಿದ್ಧರು.ಅ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News