ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
Update: 2022-08-05 19:38 IST
ಮಂಗಳೂರು, ಆ.5: ಪ್ರಸಕ್ತ (2022-23)ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಮ್-ಮೀನ್ಸ್ ವಿದ್ಯಾರ್ಥಿ ವೇತನ ಮಂಜೂರು ಮಾಡಲು ಅರ್ಜಿಯನ್ನು ಆನ್‌ಲೈನ್ ಮೂಲಕ ಆಹ್ವಾನಿಸಲಾಗಿದೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಸೆಪ್ಟಂಬರ್ ೩೦ ಮತ್ತು ಮೆಟ್ರಿಕ್ ನಂತರದ ಹಾಗೂ ಮೆರಿಟ್- ಕಮ್- ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನಾಂಕವಾಗಿರುತ್ತದೆ. ವಿದ್ಯಾರ್ಥಿಗಳು www.scholarships.gov.in ಮೂಲಕ ಅರ್ಜಿ ಸಲ್ಲಿಸಿ ಅರ್ಜಿಯ ಹಾರ್ಡ್ ಕಾಪಿ ಮತ್ತು ಅಗತ್ಯ ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು ಆಯಾಯ ಶಾಲೆ, ಕಾಲೇಜುಗಳಿಗೆ ಸಲ್ಲಿಸಲು ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಚೇರಿ dom.karnataka gov.in/dakshina_kannada/public ಅಲ್ಪಸಂಖ್ಯಾತರ ಸಹಾಯವಾಣಿ 8277799990ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.