×
Ad

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ನೆರೆ ಸಂತ್ರಸ್ತರಿಗೆ ಆಹಾರ ಕಿಟ್ ವಿತರಣೆ

Update: 2022-08-05 23:04 IST

ಭಟ್ಕಳ: ಮುಂಡಳ್ಳಿ ಗ್ರಾಮದ ನೆರೆ ಸಂತ್ರಸ್ತರಿಗೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಉ.ಕ ಜಿಲ್ಲಾ ಸಮಿತಿಯಿಂದ ಶುಕ್ರವಾರ ಆಹಾರ ಕಿಟ್ ವಿತರಣೆ ಮಾಡಲಾಯಿತು.

ಬಡ ಕುಟುಂಬಗಳು ನೆರೆಯಿಂದಾಗಿ ತುಂಬಾ ಕಷ್ಟದಲ್ಲಿದ್ದು  ಇದನ್ನು ಮನಗಂಡ ವೆಲ್ಫೇರ್ ಪಾರ್ಟಿ ಉ.ಕ. ಜಿಲ್ಲಾ ಸಮಿತಿಯಿಂದ ಕೆಲ ಕುಟುಂಬಗಳಿಗೆ ಆಹಾರ ಕಿಟ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ಅಬ್ದುಲ್ ಮಾಜಿದ್ ಕೋಲಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಸಿಫ್ ಶೇಕ್, ಜಿಲ್ಲಾ ಮುಖಂಡರಾದ ಅಬ್ದುಲ್ ಜಬ್ಬಾರ್ ಅಸದಿ, ಜಹೂರ್ ಲಾಡ್, ಶೇಷ ಮುಂತಾದ ಪಕ್ಷದ ಮುಖಂಡರು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News