ಇಂದು ಉಪರಾಷ್ಟ್ರಪತಿ ಚುನಾವಣೆ: ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರಿಂದ ಮತದಾನ

Update: 2022-08-06 07:40 GMT
Photo: Twitter/@ANI

ಹೊಸದಿಲ್ಲಿ: ಭಾರತದ ಮುಂದಿನ ಉಪರಾಷ್ಟ್ರಪತಿ ಆಯ್ಕೆಗೆ ಇಂದು ಚುನಾವಣೆ ನಡೆಯುತ್ತಿದ್ದು , ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಹಾಗೂ ಪ್ರತಿಪಕ್ಷದ ಮಾರ್ಗರೆಟ್ ಆಳ್ವಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.

ಸಂಸತ್ ಭವನದಲ್ಲಿ ಉಪರಾಷ್ಟ್ರಪತಿ ಚುನಾವಣೆ ನಡೆಯುತ್ತಿದ್ದು, ಇಂದು ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಸಂಜೆಯ ನಂತರ ಫಲಿತಾಂಶ ಬರುವ ಸಾಧ್ಯತೆ ಇದೆ.

ಇಂದು ಮತಗಟ್ಟೆ ತೆರೆಯುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಮತ ಚಲಾಯಿಸಿದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗಾಲಿಕುರ್ಚಿಯಲ್ಲಿ ಆಗಮಿಸಿ ಮತ ಚಲಾಯಿಸಿದರು.

ಕೇಂದ್ರ ಸಚಿವರಾದ ಜಿತೇಂದ್ರ ಸಿಂಗ್ ಹಾಗೂ ಅಶ್ವಿನಿ ವೈಷ್ಣವ್ ತಮ್ಮ ಮತ ಚಲಾಯಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ,  ಸಚಿವರಾದ ನಿತಿನ್ ಗಡ್ಕರಿ, ಧರ್ಮೇಂದ್ರ ಪ್ರಧಾನ್, ಜ್ಯೋತಿರಾದಿತ್ಯ ಸಿಂಧ್ಯಾ, ರಾಜೀವ್ ಚಂದ್ರಶೇಖರ್, ಗಜೇಂದ್ರ ಸಿಂಗ್, ಅರ್ಜುನ್ ಮೇಘಾವಲ್, ಮುರಳೀಧರನ್ ಮತ್ತಿರರು ಮತ ಚಲಾಯಿಸಿದರು.

ತೃಣಮೂಲ ಕಾಂಗ್ರೆಸ್ ಪಕ್ಷವು ಉಪ ರಾಷ್ಟ್ರಪತಿ ಚುನಾವಣೆಯಿಂದ ಹೊರಗುಳಿದಿದೆ.

ಲೋಕಸಭೆ ಹಾಗೂ ರಾಜ್ಯಸಭೆಯ ಸದಸ್ಯರುಗಳು ಇಂದು ಮತ ಚಲಾಯಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News