×
Ad

ವಿರೋಧದ ಬಳಿಕ ವೆಬ್‌ಸೈಟ್‌ ನಲ್ಲಿ ಹಿಂದಿ ಭಾಷೆ ಅಳಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ

Update: 2022-08-06 12:43 IST

ಬೆಂಗಳೂರು, ಆ.6:  ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವೆಬ್‌ಸೈಟ್‌ನಲ್ಲಿ 'ಹರ್‌ ಘರ್‌ ತಿರಂಗಾ' ಕಾರ್ಯಕ್ರಮದ ಬಗ್ಗೆ ಹಿಂದಿಯಲ್ಲೇ ಮಾಹಿತಿ ಪ್ರಕಟಿಸಿರುವುದನ್ನು ಆಕ್ಷೇಪಿಸಿ  ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. 

ಸದ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವೆಬ್ ಸೈಟ್ ನಲ್ಲಿರುವ ಹಿಂದಿ ಭಾಷೆಯನ್ನು ಅಳಿಸಿ ಕನ್ನಡದಲ್ಲೇ ಮಾಹಿತಿ ಪ್ರಕಟಿಸಿದೆ. 

ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, '' ನಾನು ಚಾಟಿ ಬೀಸಿದ ನಂತರ ಸರ್ಕಾರ ಎಚ್ಚೆತ್ತುಕೊಂಡು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾಲತಾಣದಲ್ಲಿ ಅನಗತ್ಯವಾಗಿ ತುರುಕಿದ್ದ ಹಿಂದಿಯನ್ನು ಕಿತ್ತೊಗೆದಿದೆ. ಬಿಜೆಪಿ ನಾಯಕರೇ, ನಾನೊಬ್ಬ ಕನ್ನಡಿಗ ಎಂಬ ಸ್ವಾಭಿಮಾನವನ್ನು ನೀವೇ ಬೆಳೆಸಿಕೊಳ್ಳಬೇಕು, ಇದು ನಾವು ಹೇಳಿ ಬರುವಂತದ್ದಲ್ಲ. ಹಿಂದಿ ರಾಷ್ಟ್ರಭಾಷೆ ಎಂಬ ಭ್ರಮೆಯಿಂದ ಹೊರಬನ್ನಿ'' ಎಂದು ಹೇಳಿದ್ದಾರೆ. 

ಇದನ್ನೂ ಓದಿ: ಕೇಂದ್ರ ಬಿಜೆಪಿ ನಾಯಕರ ಓಲೈಕೆಗಾಗಿ ರಾಜ್ಯ ಸರಕಾರದಿಂದ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅವಮಾನ: ಸಿದ್ದರಾಮಯ್ಯ

''ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಕೇಂದ್ರ ಬಿಜೆಪಿ ನಾಯಕರ ಓಲೈಕೆಗಾಗಿ ಮತ್ತೆ ಮತ್ತೆ ಕನ್ನಡವನ್ನು ತುಳಿದು ಹಿಂದಿಯನ್ನು ಮೆರೆಸಿ‌‌ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅವಮಾನ ಮಾಡುತ್ತಿರುವುದು ಖಂಡನೀಯ. ‘ಸಂಕಲ್ಪ್ ಸೆ ಸಿದ್ಧಿ' ಎಂಬ ಕಾರ್ಯಕ್ರಮದ ಬ್ಯಾನರ್ ಸಂಪೂರ್ಣ ಹಿಂದಿಮಯವಾಗಿತ್ತು.‌ ಇನ್ನೊಂದೆಡೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತನ್ನ ಜಾಲತಾಣದಲ್ಲಿ ಹಿಂದಿಯ ಕಿರೀಟ ಇಟ್ಟುಕೊಂಡು ಮೆರೆಸುತ್ತಿದೆ'' ಎಂದು ಸಿದ್ದರಾಮಯ್ಯ ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News