ನೆರೆಪೀಡಿತ ಜಿಲ್ಲೆಯ ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಭೆ

Update: 2022-08-06 07:38 GMT

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಧ್ಯಾಹ್ನ 4 ಗಂಟೆಗೆ ನೆರೆಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಇತರೆ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.

ಇಂದು ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಆರ್.ಟಿ ನಗರದ ಮನೆಯಿಂದ ನೇರಪೀಡತ ಜಿಲ್ಲೆಯ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಈ ಸಭೆಯಲ್ಲಿ ಅತಿವೃಷ್ಠಿಯಿಂದಾದ ಹಾನಿ ಮತ್ತು ಪರಿಹಾರ ಕ್ರಮದ ಬಗ್ಗೆ  ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ಪಡೆಯಲಿದ್ದಾರೆ. ಇನ್ನೂ ಸಭೆಗೆ ಸಂಬಂಧಿಸಿದ ಅಧಿಕಾರಿಗಳು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ ಹಾಗೂ ತಮ್ಮ ಜಿಲ್ಲೆಗಳಿಂದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಪಾಲ್ಗೊಳ್ಳಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News