×
Ad

ಬಿಹಾರ: ವಿಷಕಾರಿ ಮದ್ಯ ಸೇವನೆಯಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೇರಿಕೆ

Update: 2022-08-06 13:58 IST
Photo:PTI

ಛಾಪ್ರಾ(ಬಿಹಾರ): ಬಿಹಾರದ ಸರನ್ ಜಿಲ್ಲೆಯಲ್ಲಿ ವಿಷಕಾರಿ ಮದ್ಯ ಸೇವಿಸಿ ಮೃತಪಟ್ಟವರ ಸಂಖ್ಯೆ 11ಕ್ಕೇರಿದ್ದು,  12 ಮಂದಿ ತೀವ್ರ ಅಸ್ವಸ್ಥರಾಗಿದ್ದಾರೆ.  ಅವರಲ್ಲಿ ಹಲವರು ದೃಷ್ಟಿ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಶ್ ಮೀನಾ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಕುಮಾರ್ ಅವರ ಪ್ರಕಾರ, ವಿಷಕಾರಿ ಮದ್ಯ ತಯಾರಿಕೆ ಹಾಗೂ  ಮಾರಾಟದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಐವರನ್ನು ಬಂಧಿಸಲಾಗಿದ್ದು, ಸಂಬಂಧಪಟ್ಟ ಪೊಲೀಸ್ ಠಾಣೆಯ ಎಸ್‌ಎಚ್‌ಒ ಹಾಗೂ  ಸ್ಥಳೀಯ ಚೌಕಿದಾರನನ್ನು ಅಮಾನತುಗೊಳಿಸಲಾಗಿದೆ.

ಮದ್ಯ ಸೇವಿಸಿ ಇಬ್ಬರು ಸಾವನ್ನಪ್ಪಿದ್ದು, ಹಲವರು ಅಸ್ವಸ್ಥಗೊಂಡಿರುವ ಬಗ್ಗೆ ಗುರುವಾರ ಮಾಹಿತಿ ಲಭಿಸಿದೆ. ಮೇಕರ್ ಪೊಲೀಸ್ ಠಾಣೆ ವ್ಯಾಪ್ತಿಯ ಫುಲ್ವಾರಿಯಾ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಿಂದ ಈ ಘಟನೆ ವರದಿಯಾಗಿದೆ ಎಂದು ಅವರು ಹೇಳಿದ್ದಾರೆ.

"ಪೊಲೀಸ್, ಅಬಕಾರಿ ಹಾಗೂ  ವೈದ್ಯಕೀಯ ಅಧಿಕಾರಿಗಳ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಮತ್ತು ಅಸ್ವಸ್ಥರಾದವರನ್ನು ಸದರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಿತಿ ಹದಗೆಟ್ಟವರನ್ನು ಪಾಟ್ನಾದ ಪಿಎಂಸಿಹೆಚ್ ಆಸ್ಪತ್ರೆಗೆ ರವಾನಿಸಲಾಗಿದೆ" ಎಂದು ಅವರು ಛಪ್ರಾ ಪಟ್ಟಣದಲ್ಲಿ ಶುಕ್ರವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಒಂಬತ್ತು ಮಂದಿ ಸಾವನ್ನಪ್ಪಿದರು, ಒಬ್ಬರು ಖಾಸಗಿ ಆರೋಗ್ಯ ಸೌಲಭ್ಯದಲ್ಲಿ ಹಾಗೂ ಇನ್ನೊಬ್ಬ ವ್ಯಕ್ತಿಯನ್ನು ಘಟನೆಯ ಬಗ್ಗೆ ಆಡಳಿತವು ತಿಳಿಯುವ ಮೊದಲು ಅಂತ್ಯಕ್ರಿಯೆ ನಡೆಸಲಾಯಿತು ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News