ಕಾಮನ್ ವೆಲ್ತ್ ಗೇಮ್ಸ್ | ತವರಿಗೆ ಆಗಮಿಸಿದ ಪದಕ ಗೆದ್ದ ಸಾಧಕ ಗುರುರಾಜ್ ಪೂಜಾರಿ

Update: 2022-08-07 07:37 GMT

ಮಂಗಳೂರು, ಆ.7: ಇಂಗ್ಲೆಂಡ್ ನ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಗೇಮ್ಸ್-2022 (Commonwealth games 2022 ) ಕ್ರೀಡಾಕೂಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿ ಕಂಚಿನ ಪದಕ ಗೆದ್ದಿರುವ ಕುಂದಾಪುರದ ಗುರುರಾಜ್ ಪೂಜಾರಿ ರವಿವಾರ ಬೆಳಗ್ಗೆ ತವರಿಗೆ ಆಗಮಿಸಿದ್ದಾರೆ.

ಇಂದು ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಗುರುರಾಜ್ ಪೂಜಾರಿಯವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.

ಸಾಂದರ್ಭಿಕ ಚಿತ್ರ: ಕಾಮನ್ ವೆಲ್ತ್ ಗೇಮ್ಸ್ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದ ಕುಂದಾಪುರದ ಗುರುರಾಜ್ ಪೂಜಾರಿ

ಭಾರತದ ಕೀರ್ತಿಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳಗಿದ ಗುರುರಾಜ್ ಪೂಜಾರಿಯವರನ್ನು ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ಡಾ.ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್ ಆತ್ಮೀಯವಾಗಿ ಅಭಿನಂದಿಸಿ ಶುಭ ಕೋರಿದರು.

ಕಾಮನ್ ವೆಲ್ತ್ ಗೇಮ್ಸ್-2022ರಲ್ಲಿ ಭಾರತೀಯ ವೇಟ್ ಲಿಫ್ಟರ್‌ಗಳ ತಂಡ ಪಾಲ್ಗೊಂಡಿದ್ದು, ಗುರುರಾಜ್ ಕಂಚು ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಗುರುರಾಜ್ ಸತತ ಎರಡನೇ ಬಾರಿಗೆ ಪ್ರತಿಷ್ಠಿತ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಪಾಲ್ಗೊಂಡಿದ್ದು, ಕಳೆದ ಬಾರಿ ಪುರುಷರ 56 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿದ ಗುರುರಾಜ್ ಒಟ್ಟು 249 ಕೆಜಿ(111+138) ಭಾರ ಎತ್ತಿ ಬೆಳ್ಳಿಯ ಪದಕ ಗೆದ್ದಿದ್ದಲ್ಲದೆ, ತನ್ನ ವೈಯಕ್ತಿಕ ಶ್ರೇಷ್ಠ ನಿರ್ವಹಣೆ ಸಮಗಟ್ಟಿದರು. ಈ ಬಾರಿ 61 ಕೆಜಿ ವಿಭಾಗದಲ್ಲಿ ಗುರುರಾಜ್ ಸ್ಪರ್ಧಿಸಿದ್ದು, ಕಂಚಿನ ಪದಕ ಒಲಿಸಿಕೊಳ್ಳುವ ಮೂಲಕ ಎರಡನೇ ಬಾರಿ ದೇಶಕ್ಕಾಗಿ ಪದಕ ತಂದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News