ಮಂಗಳೂರು | ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಮುಳುಗಡೆ: 11 ಮೀನುಗಾರರ ರಕ್ಷಣೆ

Update: 2022-08-07 10:30 GMT

ಮಂಗಳೂರು, ಆ.7: ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ (boat) ವೊಂದು ಅಲೆಗಳ ಅಬ್ಬರಕ್ಕೆ ಸಿಲುಕಿ ಮುಳುಗಡೆಯಾದ ಘಟನೆ ಮಂಗಳೂರಿನ ಅರಬ್ಬೀ ಸಮುದ್ರದಲ್ಲಿ ರವಿವಾರ ನಡೆದಿದೆ. ಈ ವೇಳೆ ಬೋಟ್ ನಲ್ಲಿದ್ದ 11 ಮಂದಿ ಮೀನುಗಾರರನ್ನು ಇನ್ನೊಂದು ಬೋಟ್ ನಲ್ಲಿದ್ದವರು ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರಿನ ಬಂದರಿನಿಂದ ಹೊರಟಿದ್ದ ಜೈ ಶ್ರೀರಾಮ್ ಹೆಸರಿನ ಬೋಟ್ ಬಂದರ್ ನಿಂದ 30 ನಾಟಿಕಲ್ ದೂರದಲ್ಲಿ ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಮುಳುಗಡೆಯಾಗಿದೆ. ಈ ವೇಳೆ ಇನ್ನೊಂದು ಬೋಟ್ ನಲ್ಲಿದ್ದವರು 11 ಮೀನುಗಾರರನ್ನು ರಕ್ಷಿಸಿ ದಡ ಸೇರಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಮಂಗಳೂರು | ಆ.8ರವರೆಗೆ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಸೂಚನೆ

ಈ ನಡುವೆ ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಳ್ಳುವ ಸಾಧ್ಯತೆ ಇರುವುದರಿಂದ ಆ.8ರವರೆಗೆ ಮೀನುಗಾರರು ಮೀನುಗಾರಿಕೆಗೆ ಸಮುದ್ರಕ್ಕೆ ತೆರಳದಂತೆ ಹಾಗೂ ಈಗಾಗಲೇ ಸಮೀನುಗಾರಿಕೆ ತೆರಳಿರುವ ಎಲ್ಲಾ ಮೀನುಗಾರಿಕಾ ದೋಣಿಗಳು ಕೂಡಲೇ ದಡಕ್ಕೆ ವಾಪಸ್ ಆಗುವಂತೆ ಮೀನುಗಾರಿಕೆ ಇಲಾಖೆ ಎಚ್ಚರಿಕೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News