ರಾಜ್ಯದಲ್ಲಿಂದು 1,837 ಕೊರೋನ ಪ್ರಕರಣ ದೃಢ, ನಾಲ್ವರು ಸಾವು

Update: 2022-08-07 15:47 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.7: ರಾಜ್ಯದಲ್ಲಿ ರವಿವಾರ 1,837 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ನಾಲ್ವರು ಮೃತಪಟ್ಟಿದ್ದು, 1,290 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 40,20,087ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,118ಕ್ಕೆ ತಲುಪಿದೆ.        
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 11,898ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ. 

ನಾಲ್ವರ ಸಾವು: ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ ನಾಲ್ವರು ಮೃತಪಟ್ಟಿದ್ದು, ಬೆಂಗಳೂರು ನಗರ 1, ದಕ್ಷಿಣ ಕನ್ನಡ 1, ದಾವಣಗೆರೆ 1, ಮೈಸೂರು ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ.  

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 1,837 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 28, ಬಳ್ಳಾರಿ 55, ಬೆಳಗಾವಿ 57, ಬೆಂಗಳೂರು ಗ್ರಾಮಾಂತರ 36, ಬೆಂಗಳೂರು ನಗರ 1,137, ಬೀದರ್ 5, ಚಾಮರಾಜನಗರ 19, ಚಿಕ್ಕಬಳ್ಳಾಪುರ 7, ಚಿಕ್ಕಮಗಳೂರು 15, ಚಿತ್ರದುರ್ಗ 4, ದಕ್ಷಿಣ ಕನ್ನಡ 15, ದಾವಣಗೆರೆ 25, ಧಾರವಾಡ 113, ಗದಗ 1, ಹಾಸನ 15, ಹಾವೇರಿ 17, ಕಲಬುರಗಿ 26, ಕೊಡಗು 32, ಕೋಲಾರ 26, ಕೊಪ್ಪಳ 24, ಮಂಡ್ಯ 4, ಮೈಸೂರು 83, ರಾಯಚೂರು 18, ರಾಮನಗರ 2, ಶಿವಮೊಗ್ಗ 20, ತುಮಕೂರು 26, ಉಡುಪಿ 5, ಉತ್ತರ ಕನ್ನಡ 16, ವಿಜಯಪುರ ಜಿಲ್ಲೆಯಲ್ಲಿ 6 ಪ್ರಕರಣ ಪತ್ತೆಯಾಗಿವೆ. 
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News