ಹಿಮಾಚಲದಲ್ಲಿ ಮೇಘಸ್ಫೋಟಕ್ಕೆ ಓರ್ವ ಸಾವು, ಹಲವಾರು ಮನೆಗಳಿಗೆ ಹಾನಿ

Update: 2022-08-08 08:30 GMT
Photo:PTI

ಶಿಮ್ಲಾ: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಸೋಮವಾರ ಸಂಭವಿಸಿದ ಮೇಘಸ್ಫೋಟದಿಂದಾಗಿ ಉಂಟಾದ ಪ್ರವಾಹದಲ್ಲಿ  ಓರ್ವ  ವ್ಯಕ್ತಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಹಲವಾರು ಮನೆಗಳಿಗೆ ಹಾನಿಯಾಗಿದೆ ಎಂದು NDTV ವರದಿ ಮಾಡಿದೆ.

 ಸಲೂನಿಯ ಭಡೋಗಾ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಆ ಪ್ರದೇಶದಲ್ಲಿನ ಹಲವಾರು ಮನೆಗಳಿಗೆ ಹಾನಿಯಾಗಿದೆ ಮತ್ತು ಕೃಷಿ ಭೂಮಿಗೆ ನೀರು ನುಗ್ಗಿದೆ.

ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಕನಿಷ್ಠ ಎರಡು ಗ್ರಾಮಗಳು ಮೇಘಸ್ಫೋಟಕ್ಕೆ ಸಿಲುಕಿವೆ. ವರದಿಯಲ್ಲಿ ಬಲಿಯಾದವರನ್ನು 15 ವರ್ಷದ ವಿಜಯ್ ಕುಮಾರ್ ಎಂದು ಗುರುತಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News