ಕಾಮನ್‌ವೆಲ್ತ್ ಗೇಮ್ಸ್: ಬ್ಯಾಡ್ಮಿಂಟನ್ ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್ ಸಾಯಿರಾಜ್-ಚಿರಾಗ್ ಶೆಟ್ಟಿಗೆ ಚಿನ್ನ

Update: 2022-08-08 12:30 GMT
Photo:twitter

 ಬರ್ಮಿಂಗ್‌ಹ್ಯಾಮ್, ಆ.8: ಕಾಮನ್‌ವೆಲ್ತ್ ಗೇಮ್ಸ್‌ನ ಕೊನೆಯ ದಿನವಾದ ಸೋಮವಾರ ಬ್ಯಾಡ್ಮಿಂಟನ್ ಪುರುಷರ ಡಬಲ್ಸ್ ವಿಭಾಗದಲ್ಲಿ ಭಾರತದ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಹಾಗೂ ಚಿರಾಗ್ ಶೆಟ್ಟಿ ಚಿನ್ನದ ಪದಕವನ್ನು ಜಯಿಸಿದ್ದಾರೆ.

ಫೈನಲ್ ಪಂದ್ಯದಲ್ಲಿ ಸಾತ್ವಿಕ್‌ಸಾಯಿರಾಜ್ ಹಾಗೂ ಚಿರಾಗ್ ಶೆಟ್ಟಿ ಜೋಡಿ ಇಂಗ್ಲೆಂಡ್‌ನ ಬೆನ್ ಲೇನ್ ಹಾಗೂ ಸಿಯಾನ್ ವೆಂಡಿ ಅವರನ್ನು 21-15, 21-13 ಗೇಮ್‌ಗಳ ಅಂತರದಿಂದ ಮಣಿಸಿದರು. ಭಾರತಕ್ಕೆ 21ನೇ ಚಿನ್ನದ ಪದಕ ಗೆದ್ದುಕೊಟ್ಟರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News