ನಿರುದ್ಯೋಗದಲ್ಲಿ ಭಾರತ ಈಗ ವಿಶ್ವಗುರು: ದಿನೇಶ್ ಗುಂಡೂರಾವ್ ವಾಗ್ದಾಳಿ

Update: 2022-08-08 12:49 GMT

ಬೆಂಗಳೂರು, ಆ.8: ವರ್ಲ್ಡ್ ಬ್ಯಾಂಕ್ ವರದಿಯ ಪ್ರಕಾರ ಭಾರತದ ನಿರುದ್ಯೋಗ ದರ ಪಾಕಿಸ್ತಾನ ಹಾಗೂ ಶ್ರೀಲಂಕಾಕ್ಕಿಂತ ಹೆಚ್ಚಾಗಿದೆ. ನಿರುದ್ಯೋಗದಲ್ಲಿ ಭಾರತ ಈಗ ವಿಶ್ವಗುರು. ಮೋದಿಯವರ ಆಡಳಿತದಲ್ಲಿ ದೇಶದ ಯುವಕರು ಕೆಲಸವಿಲ್ಲದೆ ಪರಿತಪಿಸುತ್ತಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ಕಿಡಿಗಾರಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಮೋದಿಯವರ ಬಣ್ಣದ ಮಾತುಗಳು ಊಟಕ್ಕಿಲ್ಲದ ಉಪ್ಪಿನಕಾಯಿ ಇದ್ದಂತೆ. ನಿರುದ್ಯೋಗಿ ಯುವಕರಿಗೆ ಉದ್ಯೋಗ ಕಲ್ಪಿಸಬೇಕಾದ ಮೋದಿ ಸರಕಾರ ತನ್ನ ಜವಾಬ್ದಾರಿ ಮರೆತಿದೆ ಎಂದು ಟೀಕಿಸಿದ್ದಾರೆ.

ಉದ್ಯೋಗ ಸೃಷ್ಟಿಸದೆ ಅಮಾಯಕ ಯುವಕರ ತಲೆಯಲ್ಲಿ ಮತಾಂಧತೆಯ ಅಮಲು ತುಂಬಿ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಉದ್ಯೋಗ ಕೇಳಿದರೆ ಮೋದಿಯವರು ಪಕೋಡ ಮಾರಲು ಹೇಳುತ್ತಾರೆ. ಮಾನವ ಶಕ್ತಿಯ ಬಳಕೆ ಮಾಡಿಕೊಳ್ಳದಿದ್ದರೆ ದೇಶದ ಅಭಿವೃದ್ಧಿ ಹೇಗೆ ಸಾಧ್ಯ? ಎಂದು ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News