ಉಪ ಲೋಕಾಯುಕ್ತ ಹುದ್ದೆ ಭರ್ತಿಗೆ ಕೋರಿ ಅರ್ಜಿ: ಹೈಕೋರ್ಟ್ ನಿಂದ ನೋಟಿಸ್ ಜಾರಿ

Update: 2022-08-08 12:51 GMT

ಬೆಂಗಳೂರು, ಆ.8: ಖಾಲಿ ಇರುವ ಒಂದನೆ ಉಪ ಲೋಕಾಯುಕ್ತ ಹುದ್ದೆ ಭರ್ತಿಗೆ ನಿರ್ದೇಶಿಸಬೇಕು ಎಂಬ ಕೋರಿಕೆಯ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ.    

ಈ ಕುರಿತಂತೆ ವಕೀಲ ಎಸ್.ಉಮಾಪತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಹಾಗೂ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. 

ವಕೀಲರ ವಾದ ಆಲಿಸಿದ ನ್ಯಾಯಪೀಠ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿಗೂ ನೋಟಿಸ್ ಜಾರಿಗೊಳಿಸಿ, ಆಕ್ಷೇಪಣೆ ಸಲ್ಲಿಸಲು ಆದೇಶಿಸಿತು. 

ಎರಡು ಉಪಲೋಕಾಯುಕ್ತ ಹುದ್ದೆಗಳ ಪೈಕಿ ಸದ್ಯ ಒಂದು ಹುದ್ದೆ ಖಾಲಿ ಇದೆ. ಹೀಗಾಗಿ, ಖಾಲಿ ಇರುವ ಒಂದನೆ ಉಪ ಲೋಕಾಯುಕ್ತ ಹುದ್ದೆ ಭರ್ತಿಗೆ ನಿರ್ದೇಶಿಸಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ. ಎರಡನೆ ಉಪ ಲೋಕಾಯುಕ್ತ ಹುದ್ದೆಗೆ ಮಾರ್ಚ್‍ನಲ್ಲಿ ನಿವೃತ್ತ ನ್ಯಾ.ಕೆ.ಎನ್.ಫಣೀಂದ್ರ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿ ಆದೇಶಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News