ರಾಜ್ಯದಲ್ಲಿ ಇನ್ನೂ 2 ದಿನ ಗುಡುಗು ಸಹಿತ ಮಳೆ ಸಾಧ್ಯತೆ

Update: 2022-08-08 15:53 GMT

ಬೆಂಗಳೂರು, ಆ.8: ರಾಜ್ಯದಲ್ಲಿ ಇನ್ನೂ ಎರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ರಾಜ್ಯದ ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಚಿಕ್ಕಮಗಳೂರು, ಕೊಡಗು, ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಆ.9-10ರಂದು ಅತಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಹಾಸನ, ಶಿವಮೊಗ್ಗ, ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. 

ರಾಜ್ಯದ ಕರಾವಳಿ ತೀರದಲ್ಲಿ ಮುಂದಿನ ಎರಡು ದಿನ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 45 ಕೀ.ಮೀ.ನಿಂದ 55 ಕಿ.ಮೀ.ತಲುಪುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ತೆರಳಬಾರದು ಎಂದು ಇಲಾಖೆ ಸೂಚಿಸಿದೆ. 

ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣ: ಬೆಂಗಳೂರಿನಲ್ಲಿ ಮಂಗಳವಾರ ಮತ್ತು ಬುಧವಾರ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 24 ಮತ್ತು 20 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ. 

ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆ

ಕೊಡಗು ಜಿಲ್ಲೆಯಲ್ಲಿ ಅತಿ ಮಳೆಯಾದರೆ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಹಾಸನ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಮಳೆಯಾಗಿದೆ. ಉಳಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News