ರಾಜ್ಯದಲ್ಲಿ 3ನೇ ಸಿಎಂ ಪ್ರತಿಷ್ಠಾಪನೆಗೆ ಬಿಜೆಪಿ ಕಸರತ್ತು ನಡೆಸುತ್ತಿದೆ: ಕಾಂಗ್ರೆಸ್

Update: 2022-08-09 10:16 GMT
Editor : :
photo credit: Pti 

ಬೆಂಗಳೂರು:  ''ರಾಜ್ಯಕ್ಕೆ ಸಂಕಟ, ಬಿಜೆಪಿಗೆ ಅಧಿಕಾರದಾಟ. ಅತಿವೃಷ್ಟಿಯಿಂದ ಜನತೆ ಪರದಾಡುತ್ತಿರುವಾಗ ಸಮರೋಪಾಧಿಯಲ್ಲಿ ನೆರವಿನ ಕಾರ್ಯ ಮಾಡುವುದನ್ನು ಬಿಟ್ಟು ಬಿಜೆಪಿ ಪಕ್ಷ 3ನೇ ಸಿಎಂ ಪ್ರತಿಷ್ಠಾಪನೆಗೆ ಕಸರತ್ತು ನಡೆಸುತ್ತಿದೆ. ರಾಜ್ಯ ಸಂಕಷ್ಟಕ್ಕೆ ಎದುರಾದಾಗಲೆಲ್ಲ ಬಿಜೆಪಿ ರಾಜಕೀಯದಾಟಕ್ಕೆ ಚಾಲನೆ ಕೊಡುತ್ತದೆ'' ಎಂದು ಕಾಂಗ್ರೆಸ್ ಆರೋಪಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್,  ''ಎಷ್ಟು ಪ್ರಯತ್ನಿಸಿದರೂ ಜನತಾ ಪರಿವಾರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರನ್ನ ಕೇಶವ ಕೃಪಾದವರು 'ಸಂಘಪರಿವಾರಿ'ಯಾಗಿ ಸ್ವೀಕರಿಸಲು ಒಪ್ಪಲೇ ಇಲ್ಲ. ಆಡಿಸಿ ನೋಡು ಎಂದು ಗೊಂಬೆಯಂತಿದ್ದ  ಬೊಮ್ಮಾಯಿಯವರನ್ನು ಬೀಳಿಸಿ ನೋಡಲು ಹೈಕಮಾಂಡ್ ಹೊರಟಿದೆ'' ಎಂದು ಕಾಂಗ್ರೆಸ್ ಹೇಳಿದೆ. 

''ಈ ಬದಲಾವಣೆ ಯತ್ನ ಸರ್ಕಾರದ ವೈಫಲ್ಯಕ್ಕೋ, 3 ಸಿಎಂ ಎಂಬ ನಿಮ್ಮ ಸಂಪ್ರದಾಯಕ್ಕೋ?'' ಎಂದು ಬಿಜೆಪಿಯನ್ನು ಕಾಂಗ್ರೆಸ್ ಪ್ರಶ್ನೆ ಮಾಡಿದೆ. 

''ಬೊಮ್ಮಾಯಿಯವರೇ, ಸಿಎಂ ಹುದ್ದೆಗೆ 'ಕತ್ತಿ ವರಸೆ' ಶುರುವಾಗಿದೆ ಎಂದರೆ ನೀವು ಕುರ್ಚಿಯಿಂದ ಇಳಿಯಲು ದಿನಗಳನ್ನಲ್ಲ, ಗಂಟೆಗಳನ್ನು ಎಣಿಸುತ್ತಿದ್ದೀರಿ ಎನಿಸುತ್ತಿದೆ!  ಸಿಎಂ ಬದಲಾವಣೆ ಎಂಬ ಬೆಳವಣಿಗೆಗೆ ಕಾರಣವೇನು, ನಿಮ್ಮ ಆಡಳಿತ ವೈಫಲ್ಯವೇ? ಅಥವಾ #BJPvsBJP ಕಾದಾಟವೇ? ಅಥವಾ ಯಡಿಯೂರಪ್ಪನವರ ಕೋಪವೇ?'' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು  ಪ್ರಶ್ನೆ ಮಾಡಿದೆ. 

ಇದನ್ನೂ ಓದಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸಾಧ್ಯತೆ: ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ

Writer - :

contributor

Editor - :

contributor

Similar News