ಚಾಮರಾಜನಗರ: ಡೆತ್ ನೋಟ್ ಬರೆದಿಟ್ಟು ಉಪನ್ಯಾಸಕಿ ಆತ್ಮಹತ್ಯೆ

Update: 2022-08-09 10:55 GMT
(ಚಂದನಾ - ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕಿ)

ಚಾಮರಾಜನಗರ, ಆ.9: ಕಾಲೇಜು ಉಪನ್ಯಾಸಕಿಯೊಬ್ಬರು ಹಾಸ್ಟೆಲ್​ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರದಲ್ಲಿ ಸಂಭವಿಸಿದೆ. 

ಚಂದನಾ(26) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದು ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಚಂದನಾ, ಚಾಮರಾಜನಗರದ ಜೆ.ಎಸ್‌.ಎಸ್‌ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ಮಂಗಳವಾರ ಜೆ.ಎಸ್‌.ಎಸ್ ಹಾಕಾಲೇಜಿನ ಹಾಸ್ಟೆಲ್​ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಡೆತ್​ನೋಟ್​ ಒಂದು ಪತ್ತೆಯಾಗಿದ್ದು, ‘ನನ್ನ ಸಾವಿಗೆ ನಾನೇ ಕಾರಣ’ ಎಂದು ಬರೆಯಲಾಗಿದೆ. ಚಾಮರಾಜನಗರ ಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News