ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ; ಏಳಕ್ಕೇರಿದ ಬಂಧಿತರ ಸಂಖ್ಯೆ

Update: 2022-08-09 13:44 GMT
ಪ್ರವೀಣ್ ನೆಟ್ಟಾರು

ಸುಳ್ಯ:ಯುವ ಮೋರ್ಚಾ(BJYM) ಮುಖಂಡ ಪ್ರವೀಣ್ ನೆಟ್ಟಾರು(Praveen Nettaru) ಹತ್ಯೆ ಪ್ರಕರಣದಲ್ಲಿ ಮತ್ತೆ ಓರ್ವ ಆರೋಪಿಯನ್ನು ಬಂದಿಸಲಾಗಿದೆ. ಸುಳ್ಯ ಜಟ್ಟಿಪಳ್ಳದ ಅಬ್ದುಲ್ ಕಬೀರ್ ಸಿ.ಎ.(33) ಎಂಬಾತನನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಸಂಚಲನ ಸೃಷ್ಠಿಸಿದ್ದ ನೆಟ್ಟಾರು ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೇರಿದೆ. ಆರು ಮಂದಿಯನ್ನು ಈ ಹಿಂದೆ ಬಂಧಿಸಲಾಗಿತ್ತು. ಸವಣೂರಿನ ಜಾಕಿರ್ (29, ಬೆಳ್ಳಾರೆಯ ಶಫೀಕ್ (27), ಬೆಳ್ಳಾರೆ ಪಳ್ಳಿಮಜಲಿನ ಸದ್ದಾಂ(32) ಹಾಗು ಹಾರೀಸ್(42), ಸುಳ್ಯ ನಾವೂರಿನ ಆಬಿದ್(22), ಬೆಳ್ಳಾರೆ ಗೌರಿ ಹೊಳೆ ನಿವಾಸಿ ನೌಫಲ್(28) ಎಂಬವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: 'ದೇವಸ್ಥಾನದ ಕಾಣಿಕೆ ಹುಂಡಿ ಕದಿಯುವ ಮುನ್ನ ಕೈಮುಗಿದು ಪ್ರಾರ್ಥಿಸಿದ ಕಳ್ಳ'

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ಮುಂದುವರಿಸಿದ್ದು ಪ್ರಕರಣದಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗಿದ್ದು ಆರೋಪಿಗಳ ಪತ್ತೆ ಕಾರ್ಯ ನಡೆಸಲಾಗುತ್ತಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News