ಕೊಡಗಿನಲ್ಲಿ ಮಳೆ ಬಿಡುವು: ಭಾಗಮಂಡಲದಲ್ಲಿ ತಗ್ಗಿದ ಪ್ರವಾಹ

Update: 2022-08-09 15:14 GMT

ಮಡಿಕೇರಿ ಆ.9 : ಕಳೆದ ಎರಡು ವಾರಗಳಿಂದ ಕೊಡಗಿನಲ್ಲಿ ಎಡೆಬಿಡದೆ ಸುರಿಯುತ್ತಿದ್ದ ಮಹಾಮಳೆ ಇಂದು (ಮಂಗಳವಾ ಕೊಂಚ ಕಡಿಮೆಯಾಗಿದೆ. ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆಯಾದರೂ ಅಬ್ಬರ ಕ್ಷೀಣಿಸಿದೆ.

ಭಾಗಮಂಡಲದ ತ್ರಿವೇಣಿ ಸಂಗಮದ ಬಳಿ ಪ್ರವಾಹದ ನೀರು ತಗ್ಗಿದ್ದು, ರಸ್ತೆ ಸಂಚಾರ ಸುಗಮವಾಗಿದೆ. ಇಲ್ಲಿ ಮಳೆ ( RAIN) ಕ್ಷೀಣಿಸಿದ್ದು, ಸಂಜೆಯ ವೇಳೆಗೆ ಕೊಂಚ ಬಿರುಸು ಪಡೆಯಿತು. ವಿರಾಜಪೇಟೆಯಲ್ಲಿ ಸೋಮವಾರ ಮಧ್ಯ ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಅನೇಕ ವಿದ್ಯುತ್ ಕಂಬಗಳು ಧರೆಗುರುಳಿದವು. ಇದರಿಂದ ಸಂಚಾರ ಮತ್ತು ವಿದ್ಯುತ್ ವ್ಯತ್ಯಯ ಉಂಟಾಯಿತು.

ದಕ್ಷಿಣ ಕೊಡಗಿನಲ್ಲಿ ನದಿಗಳಲ್ಲಿ ಪ್ರವಾಹದ ನೀರು ತಗ್ಗಿಲ್ಲ. ಮಡಿಕೇರಿ ವ್ಯಾಪ್ತಿಯಲ್ಲಿ ಮೈಕೊರೆಯುವ ಚಳಿ, ಗಾಳಿ ಸಹಿತ ಮಳೆಯಾಗುತ್ತಿದೆ. ಮಡಿಕೇರಿಯಿಂದ ಮಂಗಳೂರಿಗೆ ತೆರಳುವ ಮದೆನಾಡು ಬಳಿ ಗುಡ್ಡ ಕುಸಿಯುವ ಆತಂಕ ಎದುರಾಗಿದೆ. ಜಿಲ್ಲೆಯ ವಿವಿಧೆಡೆ ಮರಗಳು ಧರೆಗುರುಳಿದ ಘಟನೆ ನಡೆದಿದೆ. 

► 600 ಮಿ.ಮೀ ಅಧಿಕ ಮಳೆ 

ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಕೊಡಗಿನಲ್ಲಿ ಜನವರಿಯಿಂದ ಇಲ್ಲಿಯವರೆಗೆ 600 ಮಿ.ಮೀ ನಷ್ಟು ಅಧಿಕ ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2485.44 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1888.48 ಮಿ.ಮೀ ಮಳೆಯಾಗಿತ್ತು.                       

ಮಡಿಕೇರಿ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 50.30 ಮಿ.ಮೀ. ಕಳೆದ ವರ್ಷ ಇದೇ ದಿನ 14.98 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3585.11 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2607.06 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 66.95 ಮಿ.ಮೀ. ಕಳೆದ ವರ್ಷ ಇದೇ ದಿನ 0.17 ಮಿ.ಮೀ.  ಜನವರಿಯಿಂದ ಇಲ್ಲಿಯವರೆಗಿನ ಮಳೆ 1894.14 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1514.28 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 53.26 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1977.08 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1544.11 ಮಿ.ಮೀ. ಮಳೆಯಾಗಿತ್ತು.

::: ಹಾರಂಗಿ ನೀರಿನ ಮಟ್ಟ :::

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2855.29 ಅಡಿಗಳು. ಕಳೆದ ವರ್ಷ ಇದೇ ದಿನ 2854.34 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 20.60 ಮಿ.ಮೀ., ಕಳೆದ ವರ್ಷ ಇದೇ ದಿನ 3.20 ಮಿ.ಮೀ.,  ಇಂದಿನ ನೀರಿನ ಒಳಹರಿವು 16,120 ಕ್ಯುಸೆಕ್, ಕಳೆದ ವರ್ಷ ಇದೇ ದಿನ 7076 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 16,812 ಕ್ಯುಸೆಕ್. ನಾಲೆಗೆ 100 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 12704 ಕ್ಯುಸೆಕ್. ನಾಲೆಗೆ 250 ಕ್ಯುಸೆಕ್.  
   

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News