ಚಿಕ್ಕಮಗಳೂರು: ಮನೆ ಮೇಲೆ ಮರ ಬಿದ್ದು ಇಬ್ಬರು ಮೃತ್ಯು

Update: 2022-08-10 02:55 GMT

ಚಿಕ್ಕಮಗಳೂರು: ಮನೆ ಮೇಲೆ ಮರ ಬಿದ್ದು ಇಬ್ಬರು ಮೃತಪಟ್ಟ ಘಟನೆ ಕಳಸ ತಾಲೂಕಿನ ಕೆ.ತಲಗೂರು ಗ್ರಾಮದಲ್ಲಿ ಮಂಗಳವಾರ ರಾತ್ರಿ 12 ಗಂಟೆಯ ಸುಮಾರಿಗೆ ನಡೆದಿದೆ.

ಮೃತರನ್ನು  ಚಂದ್ರಮ್ಮ ಹಾಗೂ ಅವರ ಸಂಬಂಧಿ ಸರಿತಾ ಎಂದು ಗುರುತಿಸಲಾಗಿದೆ.

ಮಂಗಳವಾರ ರಾತ್ರಿ ಚಂದ್ರಮ್ಮ ಅವರ ಮನೆಯಲ್ಲಿ ಚಂದ್ರಮ್ಮ, ಸರಿತಾ, ಮಕ್ಕಳಾದ ಸುನಿಲ್ ಹಾಗೂ ದೀಕ್ಷಿತ್  ಎಂಬವರು ಮಲಗಿದ್ದ ವೇಳೆ ಮನೆಯ ಪಕ್ಕದಲ್ಲಿ ಇದ್ದ ಬೃಹದಾಕಾರದ ಮರ ಚಂದ್ರಮ್ಮ ಅವರ ಮನೆಯ ಮೇಲೆ ಬಿದ್ದು ಮನೆಯೊಳಗೆ ಮಲಗಿದ್ದ ಸರಿತಾ ಸ್ಥಳದಲ್ಲಿ ಮೃತಪಟ್ಟಿದ್ದು, ಚಂದ್ರಮ್ಮರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಈ ಬಗ್ಗೆ ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News