ಸುಳ್ಯ: ತಲ್ವಾರ್ ಹಿಡಿದು ಓಡಾಡಿದ ಸಂದೀಪ್ ಸೆರೆ

Update: 2022-08-10 10:04 GMT
ಬಂಧಿತ ಸಂದೀಪ್

ಸುಳ್ಯ: ಕನಕಮಜಲು ಗ್ರಾಮದ ಸುಣ್ಣಮೂಲೆ ಬಳಿ ತಲ್ವಾರ್ ಹಿಡಿದು ಓಡಾಡಿದ ಯುವಕನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.

ಸಂದೀಪ್ ಎಂಬಾತ ತಲವಾರು ಹಿಡಿದುಕೊಂಡು ಓಡಾಡುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಸಂದೀಪ್ ನನ್ನು ಸುಳ್ಯ ಪೊಲೀಸರು ಬಂಧಿಸಿದ್ದು ಸುಮೊಟೋ ಪ್ರಕರಣ ದಾಖಲಿಸಿದ್ದಾರೆ.

ಸಂದೀಪ್ ವಿಪರೀತ ಮದ್ಯ ಸೇವನೆಯ ಚಟ ಹೊಂದಿದ್ದು, ಮಾನಸಿಕ ಸ್ಥಿರತೆ ಕಳೆದುಕೊಂಡು ಈ ರೀತಿ ವರ್ತಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಗಂಭೀರತೆ ಅರಿತ ಪೊಲೀಸರು ಸ್ಥಳಕ್ಕೆ ತೆರಳಿ ತಲವಾರು ವಶಪಡಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News