ಆ.12ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: ಕೆಎಸ್ಸಾರ್ಟಿಸಿ ಬಸ್‍ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

Update: 2022-08-10 14:23 GMT

ಬೆಂಗಳೂರು, ಆ.10: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳನ್ನು ಆ.12ರಿಂದ ಆ.25ರವರೆಗೆ ನಡೆಸಲಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್ಸಾರ್ಟಿಸಿ ಬಸ್ಸುಗಳಲ್ಲಿ ಉಚಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷೆಯ ಪ್ರವೇಶ ಪತ್ರವನ್ನು ತೋರಿಸಿ, ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಹಾಗೂ ಪರೀಕ್ಷಾ ಕೇಂದ್ರದಿಂದ ವಾಸಸ್ಥಳಕ್ಕೆ ಉಚಿತವಾಗಿ ಪ್ರಯಾಣಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News