ದ.ಕ.ಜಿಲ್ಲೆ : ಕೋವಿಡ್‌ಗೆ ಯುವತಿ ಬಲಿ

Update: 2022-08-10 14:55 GMT
ಸಾಂದರ್ಭಿಕ ಚಿತ್ರ

ಮಂಗಳೂರು, ಆ.10: ದ.ಕ.ಜಿಲ್ಲೆಯಲ್ಲಿ ಬುಧವಾರ ಕೋವಿಡ್‌ಗೆ ಶಿವಮೊಗ್ಗ ಜಿಲ್ಲೆಯ 20 ವರ್ಷ ಪ್ರಾಯದ ಯುವತಿಯೊಬ್ಬಳು ಬಲಿಯಾಗಿದ್ದಾರೆ. ಇದರೊಂದಿಗ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 1857ಕ್ಕೇರಿದೆ.

ಬುಧವಾರ 17 ಕೋವಿಡ್ ಪ್ರಕರಣ ಪತ್ತೆಯಾಗುವುದರೊಂದಿಗೆ ದ.ಕ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1,36,378ಕ್ಕೇರಿದೆ. ಅಲ್ಲದೆ ಗುಣಮುಖರಾದವರ ಸಂಖ್ಯೆ 1,34,459 ಕ್ಕೇರಿದೆ ಎಂದು ದ.ಕ.ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News