ಯುವಿಸಿಇ ಆಡಳಿತ ಮಂಡಲಿಯ ಅಧ್ಯಕ್ಷರಾಗಿ ಮುತ್ತುರಾಮನ್ ಆಯ್ಕೆ

Update: 2022-08-10 18:19 GMT

ಬೆಂಗಳೂರು, ಆ.10: ಟಾಟಾ ಸ್ಟೀಲ್ಸ್ ಲಿಮಿಟೆಡ್ ಮತ್ತು ಟಾಟಾ ಇಂಟನ್ರ್ಯಾಷನಲ್ ಸಂಸ್ಥೆಗಳ ಅಧ್ಯಕ್ಷರಾಗಿ ಕೆಲಸ ಮಾಡಿದ ಮುತ್ತುರಾಮನ್ ಅವರನ್ನು ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜಿನ (ಯುವಿಸಿಇ) ಆಡಳಿತ ಮಂಡಳಿಯ ಮುಖ್ಯಸ್ಥರನ್ನಾಗಿ 4 ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ.

ಯುವಿಸಿಇಗೆ ಸಂಪೂರ್ಣ ಸ್ವಾಯತ್ತತೆ ನೀಡುವ ಸರಕಾರದ ಪ್ರಕ್ರಿಯೆಯ ಮೊದಲ ಭಾಗವಾಗಿ ಈ ನೇಮಕ ಮಾಡಲಾಗಿದೆ. ರಾಜ್ಯ ಮಟ್ಟದಲ್ಲಿ ಈ ರೀತಿಯ ಕ್ರಾಂತಿಕಾರಕ ತೀರ್ಮಾನ ಆಗಿರುವುದು ಇದೇ ಮೊದಲು. ಮುಂದಿನ ದಿನಗಳಲ್ಲಿ ಅಧ್ಯಕ್ಷರ ನೇಮಕದ ವಿಷಯದಲ್ಲಿ ಸರಕಾರದ ಪಾತ್ರ ಹೆಚ್ಚಾಗಿ ಇರುವುದಿಲ್ಲ. ಹಾಲಿ ಇರುವ ಅಧ್ಯಕ್ಷರೇ ಅವರ ಉತ್ತರಾಧಿಕಾರಿಯನ್ನು ನೇಮಕ ಮಾಡಲಿದ್ದಾರೆ. ಇದು ಐಐಎಂ, ಐಐಟಿ ಮಾದರಿಯಲ್ಲಿ ಇರುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News