×
Ad

ಆವರ್ಸೆ ಗ್ರಾಪಂ ಮಾಜಿ ಸದಸ್ಯ ಇಬ್ರಾಹಿಂ ಸಾಹೇಬ್ ಹೈಕಾಡಿ ನಿಧನ

Update: 2022-08-11 10:51 IST

ಉಡುಪಿ : ಆವರ್ಸೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಸಾಮಾಜಿಕ ಕಾರ್ಯಕರ್ತ  ಇಬ್ರಾಹಿಂ ಸಾಹೇಬ್ ಹೈಕಾಡಿ (71) ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಗ್ಗೆ  ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ಆವರ್ಸೆ ಗ್ರಾಮ ಪಂಚಾಯತ್ ನಲ್ಲಿ ಎರಡು ಅವಧಿಗೆ ಸದಸ್ಯರಾಗಿ, ಉಡುಪಿ ಭೂ ನ್ಯಾಯ ಮಂಡಳಿಯ ಸದ್ಯಸರಾಗಿ, ಹೈಕಾಡಿ ಮಸೀದಿಯ ಅಧ್ಯಕ್ಷರಾಗಿ, ಹೈಕಾಡಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಮೃತರು ಹೂಡೆ ಸಾಲಿಹಾತ್ ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿ ಅಸ್ಲಾಂ ಹೈಕಾಡಿ ಸೇರಿದಂತೆ ಐವರು ಪುತ್ರರು ಹಾಗೂ ಮೂವರು ಪುತ್ರಿಯರು ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಇವರ ಅಂತ್ಯಕ್ರಿಯೆಯು ಇಶಾ ನಮಾಝ್ ಬಳಿಕ ಹೈಕಾಡಿ ಜಾಮಿಯ ಮಸೀದಿಯ ವಠಾರದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News