ಮಹಾರಾಷ್ಟ್ರದ ಜಲ್ನಾದಲ್ಲಿ ತೆರಿಗೆ ಇಲಾಖೆ ದಾಳಿ: 390 ಕೋಟಿ ರೂ. ಮೌಲ್ಯದ ಆಸ್ತಿ ವಶ

Update: 2022-08-11 05:26 GMT
Photo:PTI

ಜಲ್ನಾ: ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಜಲ್ನಾದಲ್ಲಿ ಕೆಲವು ವ್ಯಾಪಾರ ಗುಂಪುಗಳಿಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆಯು ಸುಮಾರು  390 ಕೋಟಿ ರೂ. ಬೇನಾಮಿ ಆಸ್ತಿಯನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಶಪಡಿಸಿಕೊಂಡ ಸೊತ್ತುಗಳಲ್ಲಿ  56 ಕೋಟಿ ನಗದು ರೂ. ಹಾಗೂ  14 ಕೋಟಿ ರೂ. ಮೌಲ್ಯದ 32 ಕೆಜಿ ಚಿನ್ನ, ಮುತ್ತುಗಳು ಹಾಗೂ  ವಜ್ರಗಳು ಸೇರಿವೆ. ದಾಳಿಯ ವೇಳೆ ಅಧಿಕಾರಿಗಳು ಕೆಲವು ಆಸ್ತಿ ದಾಖಲೆಗಳು ಮತ್ತು ಡಿಜಿಟಲ್ ಡೇಟಾವನ್ನು ವಶಪಡಿಸಿಕೊಂಡಿದ್ದಾರೆ.

ಉಕ್ಕು, ಬಟ್ಟೆ ಹಾಗೂ  ರಿಯಲ್ ಎಸ್ಟೇಟ್ ವ್ಯವಹಾರ ನಡೆಸುವ ಎರಡು ವ್ಯಾಪಾರ ಗುಂಪುಗಳಿಗೆ ಸಂಬಂಧಿಸಿದ ಕಟ್ಟಡದ ಮೇಲೆ ಆಗಸ್ಟ್ 1 ಹಾಗೂ  8 ರ ನಡುವೆ ದಾಳಿಗಳನ್ನು ನಡೆಸಲಾಯಿತು.

ದಾಳಿಯ ವೇಳೆ ವಶಪಡಿಸಿಕೊಂಡ ನಗದನ್ನು ನಿಖರವಾಗಿ ಲೆಕ್ಕ ಹಾಕಲು ಆದಾಯ ತೆರಿಗೆ ಅಧಿಕಾರಿಗಳಿಗೆ ಸುಮಾರು 13 ಗಂಟೆಗಳು ಬೇಕಾಯಿತು.

ಜಿಲ್ಲೆಯಲ್ಲಿ ಕೆಲವು ವ್ಯಾಪಾರ ಗುಂಪುಗಳಿಂದ ತೆರಿಗೆ ವಂಚನೆ ಆರೋಪದ ಬಗ್ಗೆ ಮಾಹಿತಿ ಪಡೆದ ಆದಾಯ ತೆರಿಗೆ ಇಲಾಖೆಯು ಶೋಧ ಕಾರ್ಯಾಚರಣೆಗಾಗಿ ರಾಜ್ಯಾದ್ಯಂತ 260 ಅಧಿಕಾರಿಗಳನ್ನು ಒಳಗೊಂಡ ಐದು ತಂಡಗಳನ್ನು ರಚಿಸಿತ್ತು.

ಕಾರ್ಯಾಚರಣೆಯಲ್ಲಿ 120 ಕ್ಕೂ ಹೆಚ್ಚು ವಾಹನಗಳನ್ನು ಬಳಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News