ಭಾರತದ 14ನೇ ಉಪ ರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ಪ್ರಮಾಣ ವಚನ ಸ್ವೀಕಾರ

Update: 2022-08-11 07:43 GMT
PHOTO: twitter.com/NewsArenaIndia

ಹೊಸದಿಲ್ಲಿ: ಭಾರತದ 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧನಕರ್  ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು ಎಂದು NDTV ವರದಿ ಮಾಡಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧನಕರ್ ಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಸಮಾರಂಭದಲ್ಲಿ ಮಾಜಿ ಉಪರಾಷ್ಟ್ರಪತಿಗಳಾದ ಎಂ.  ವೆಂಕಯ್ಯ ನಾಯ್ಡು ಹಾಗೂ  ಹಮೀದ್ ಅನ್ಸಾರಿ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪಶ್ಚಿಮಬಂಗಾಳದ ಮಾಜಿ ರಾಜ್ಯಪಾಲರಾಗಿರುವ ಧನಕರ್ ಇತ್ತೀಚೆಗೆ ನಡೆದ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ  ಅಭ್ಯರ್ಥಿ ಮಾರ್ಗರೆಟ್ ಆಳ್ವಾ ಅವರನ್ನು ಸೋಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News