×
Ad

​ಡಿ. ದೇವರಾಜ ಅರಸು ಪ್ರಶಸ್ತಿ: ಅರ್ಜಿ ಆಹ್ವಾನ

Update: 2022-08-11 19:12 IST
​ಡಿ. ದೇವರಾಜ ಅರಸು

ಉಡುಪಿ : ಪ್ರಸಕ್ತ  ಸಾಲಿನ ಡಿ.ದೇವರಾಜ ಅರಸು ಅವರ ೧೦೭ನೇ ಜನ್ಮದಿನಾಚರಣೆ ಸಂದರ್ಭದಲ್ಲಿ ಜಿಲ್ಲೆಗಳಲ್ಲಿ ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಿರುವ ವ್ಯಕ್ತಿ/ಸಂಘ ಸಂಸ್ಥೆಗಳಿಗೆ ಜಿಲ್ಲಾ ಮಟ್ಟದ ಡಿ. ದೇವರಾಜ ಅರಸು ಪ್ರಶಸ್ತಿಗಾಗಿ ಅರ್ಹರನ್ನು ಆಯ್ಕೆ ಮಾಡಲು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿದೆ.

ಈ ಪ್ರಶಸ್ತಿಗೆ ಅರ್ಹವಿರುವ ವ್ಯಕ್ತಿಯು ದೇವರಾಜ ಅರಸು ಅವರ ಧ್ಯೇಯೋದ್ದೇಶಗಳನ್ನು ಹೊಂದಿದ್ದು, ಆ ನಿಟ್ಟಿನಲ್ಲಿ ಕಾರ್ಯ ನಿರತರಾಗಿರಬೇಕು. ದೇವರಾಜ ಅರಸು ಕಾರ್ಯಗತಗೊಳಿಸಿದ ಯೋಜನೆ/ ಕಾರ್ಯಕ್ರಮಗಳಲ್ಲಿ ಒಂದೆರೆಡರಲ್ಲಿಯಾದರೂ ಸ್ವಯಂ ಪ್ರೇರಣೆಯಿಂದ ತಮ್ಮನ್ನು ತೊಡಗಿಸಿಕೊಂಡು ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಿರಬೇಕು. ಹಿಂದುಳಿದ ವರ್ಗ ಗಳನ್ನು ಸಂಘಟಿಸಿ ಅವರ ಶ್ರೇಯೋಭಿವೃದ್ಧಿಗಾಗಿ ದುಡಿಯುತ್ತಿರಬೇಕು ಹಾಗೂ ಮೀಸಲಾತಿ/ಶಿಕ್ಷಣ/ಸಾಮಾಜಿಕ ಪರಿವರ್ತನೆಗಾಗಿ ಶ್ರಮಿಸಿರಬೇಕು.

ಹಿಂದುಳಿದ ವರ್ಗಗಳ ಶಿಕ್ಷಣ/ ಆರ್ಥಿಕ ಅಭಿವೃದ್ಧಿ, ಔದ್ಯೋಗಿಕ ಕ್ಷೇತ್ರಗಳಲ್ಲಿ ಕಾರ್ಯನಿರತನಾಗಿದ್ದು, ಈ ಸಂಬಂಧ ಅವರ ಕೊಡುಗೆ ರಾಜ್ಯ/ರಾಷ್ಟ್ರ ಮಟ್ಟ ದಲ್ಲಿ ಗುರುತಿಲ್ಪಟ್ಟಿರಬೇಕು. ಹಿಂದುಳಿದ ವರ್ಗಗಳ ಅತ್ಯಂತ ಹಿಂದುಳಿದ ಜನಾಂಗವನ್ನು ಮುಖ್ಯ ವಾಹಿನಿಗೆ ತರಲು ಪ್ರತ್ಯೇಕವಾಗಿ ಅಥವಾ ಪರೋಕ್ಷವಾಗಿ ಶ್ರಮಿಸುತ್ತಿರಬೇಕು.

ಪ್ರಶಸ್ತಿಗೆ ಆಯ್ಕೆಯಾದ ವ್ಯಕ್ತಿ, ಸಂಘ ಸಂಸ್ಥೆಗಳಿಗೆ ೫೦,೦೦೦ರೂ. ನಗದು ಹಾಗೂ ಫಲಕದೊಂದಿಗೆ ಪ್ರಶಸ್ತಿ ನೀಡಲಾಗುವುದು. ಅರ್ಜಿ ಸಲ್ಲಿಸಲು ಆ.೧೭ ಕೊನೆಯ ದಿನವಾಗಿದ್ದು, ಅರ್ಹ ಸಾಧಕರು ಮತ್ತು ಸಂಘ ಸಂಸ್ಥೆಗಳು ತಮ್ಮ ಅರ್ಜಿಗಳನ್ನು ನೇರವಾಗಿ ಅಥವಾ ಅವರ ಪರವಾಗಿ  ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಚೇರಿಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News