ಉಡುಪಿ; ಧ್ವಜಸಂಹಿತೆ ಅನುಸಾರ ರಾಷ್ಟ್ರಧ್ವಜ ಹಾರಿಸಲು ಸೂಚನೆ
Update: 2022-08-11 20:39 IST
ಉಡುಪಿ : ಜಿಲ್ಲಾ ಮಟ್ಟದ ಆಝಾದೀ ಕಾ ಅಮೃತ್ ಮಹೋತ್ಸವದ ಅಂಗವಾಗಿ ಜಿಲ್ಲೆಯಲ್ಲಿರುವ ಎಲ್ಲಾ ಮಸೀದಿ ಮತ್ತು ಮದ್ರಸಗಳಲ್ಲಿ ರಾಷ್ಟ್ರಧ್ವಜವನ್ನು ಧ್ವಜಸಂಹಿತೆ ಅನುಸಾರ ಹಾರಿಸುವಂತೆ ಹಾಗೂ ರಾಷ್ಟ್ರಧ್ವಜಕ್ಕೆ ಅಗೌರವ ಉಂಟಾಗದಂತೆ ಎಲ್ಲಾ ಎಚ್ಚರಿಕೆ ಕ್ರಮ ವಹಿಸುವಂತೆ ಎಲ್ಲಾ ವಕ್ಫ್ ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಆಡಳಿತಾಧಿಕಾರಿಗಳಿಗೆ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಸಿ.ಎಚ್.ಅಬ್ದುಲ್ ಮುತ್ತಾಲಿ ತಿಳಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.