ACB ರದ್ದು ವಿಚಾರ: ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಪ್ರತಿಕ್ರಿಯೆ ಏನು?

Update: 2022-08-11 15:21 GMT

ಬೆಂಗಳೂರು: ‘ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಬದಲು ಲೋಕಾಯುಕ್ತ ಸಂಸ್ಥೆಯೆ ಸೂಕ್ತವೆಂದು ಹೈಕೋರ್ಟ್ ನೀಡಿರುವ ಆದೇಶದಿಂದ ನನಗೆ ಸಂತಸ ತಂದಿದೆ' ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ತಿಳಿಸಿದ್ದಾರೆ. 

''ಲೋಕಾಯುಕ್ತ ಸಂಸ್ಥೆಗೆ ಹೆಚ್ಚಿನ ಅಧಿಕಾರ ನೀಡಬೇಕು. ಅಲ್ಲಿಗೆ ಉತ್ತಮ ಅಧಿಕಾರಿಗಳನ್ನು ನೇಮಿಸಬೇಕು. ಸರಕಾರ ತಮಗೆ ಬೇಕಾದ ಅಧಿಕಾರಿಗಳನ್ನು ಯಾವುದೇ ಕಾರಣಕ್ಕೂ ನೇಮಕ ಮಾಡಬಾರದು. ಲೋಕಾಯುಕ್ತರೆ ತಮಗೆ ಬೇಕಾದ ಅಧಿಕಾರಿಗಳನ್ನು ನೇಮಿಸಿಕೊಳ್ಳಲಿ. ಲೋಕಾಯುಕ್ತ ಸಂಸ್ಥೆಗೆ ಅಧಿಕಾರದ ಜೊತೆಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಬೇಕು'' ಎಂದು ಹೇಳಿದ್ದಾರೆ. 

ಇದನ್ನೂ ಓದಿ:  ಎಸಿಬಿ ರಚನೆ ಆದೇಶ ರದ್ದುಪಡಿಸಿದ ಹೈಕೋರ್ಟ್

ಎಸಿಬಿ ರಚನೆ ಆದೇಶ ರದ್ದುಪಡಿಸಿ ಲೋಕಾಯುಕ್ತಕ್ಕೆ ವರ್ಗಾಯಿಸಲು ಹೈಕೋರ್ಟ್ ಗುರುವಾರ ಆದೇಶಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News