ಬೆಂಗಳೂರು: ಆರೋಗ್ಯ ಸೌಧ ಆವರಣದಲ್ಲಿ ಮಾಸ್ಕ್ ಧರಿಸದಿದ್ದರೆ 250 ರೂ.ದಂಡ

Update: 2022-08-11 15:29 GMT

ಬೆಂಗಳೂರು, ಆ. 11: ‘ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸೌಧದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ಸಿಬ್ಬಂದಿ ಹಾಗೂ ಆರೋಗ್ಯ ಸೌಧಕ್ಕೆ ಭೇಟಿ ನೀಡುವ ಎಲ್ಲರೂ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ' ಎಂದು ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಆದೇಶ ಹೊರಡಿಸಿದ್ದಾರೆ.

‘ಆರೋಗ್ಯಸೌಧದ ಆವರಣ ಹಾಗೂ ಕಚೇರಿಯಲ್ಲಿ ಮಾಸ್ಕ್ ಧರಿಸದವರಿಗೆ 250 ರೂ.ದಂಡ ವಿಧಿಸಲಾಗುವುದು. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸುವ ನಿಯಮವನ್ನು ಪಾಲಿಸುವಂತೆ ಖಚಿತಪಡಿಸಿಕೊಳ್ಳಲು ಆರೋಗ್ಯ ಸೌಧದ ಹೌಸ್ ಕೀಪಿಂಗ್ ವಿಭಾಗದ ಮುಖ್ಯ ಇಂಜಿನಿಯರ್ ಅವರಿಗೆ ಸೂಚಿಸಲಾಗಿದೆ' ಎಂದು ರಂದೀಪ್ ಅವರು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News