ಚಿನ್ನ ಅಕ್ರಮ ಸಾಗಾಟ ಆರೋಪ; ಕಾಸರಗೋಡು ಮೂಲದ ಓರ್ವ ಸೆರೆ

Update: 2022-08-11 15:57 GMT

ಬಜ್ಪೆ,‌ ಆ.11: ಚಿನ್ನ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಓರ್ವನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತನನ್ನು ಕಾಸರಗೋಡು ಮೂಲದ ನಿವಾಸಿ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದು, ಈತ ದುಬೈಯಿಂದ ಆ.10ರಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ‌ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈತ ಸುಮಾರು 43.29 ಲಕ್ಷ ರೂ. ಮೌಲ್ಯದ 24 ಕ್ಯಾರೆಟ್ ನ 831ಗ್ರಾಂ ಚಿನ್ನವನ್ನು ಪೇಸ್ಟ್ ರೂಪಕ್ಕೆ  ಪರಿವರ್ತಿಸಿ ಒಳ ಉಡುಪಿನ ಹೊಲಿದ ಪಾಕೆಟ್ ನಲ್ಲಿಟ್ಟು ಸಾಗಾಟ ಮಾಡುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂಬಂಧ ಆರೋಪಿಯನ್ನು ಬಂಧಿಸಿರುವ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News