4 ವರ್ಷಗಳಿಂದ ಬಾಕಿ ಉಳಿಸಿಕೊಂಡಿರುವ ಎಸ್ಸಿ- ಎಸ್ಟಿ ಸ್ಕಾಲರ್ಶಿಪ್ ಬಿಡುಗಡೆಗೊಳಿಸಿ: ಸಿಎಂಗೆ ವಿದ್ಯಾರ್ಥಿಗಳ ಮನವಿ

Update: 2022-08-11 16:22 GMT

ಮೈಸೂರು,ಆ.11: ಕಳೆದ ನಾಲ್ಕು  ವರ್ಷಗಳಿಂದ ಬಾಕಿ ಉಳಿಸಿಕೊಂಡಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಮೈಸೂರು ವಿವಿ ದಲಿತ ವಿದ್ಯಾರ್ಥಿಗಳ ಒಕ್ಕೂಟ ಮತ್ತು ಸಂಶೋಧಕರ ಸಂಘ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿತು.

ಮೈಸೂರು ವಿಶ್ವವಿದ್ಯಾನಿಲಯ ಆಯೋಜಿಸಿದ್ದ ಯುವಜನ ಮಹೋತ್ಸವಕ್ಕೆ ಗುರುವಾರ ಆಗಮಿಸಿದ್ದ ಮುಖ್ಯಮಂತ್ರಿಗಳಿಗೆ ದಲಿತ ವಿದ್ಯಾರ್ಥಿಗಳು ಮನವಿ ಪತ್ರ ಸಲ್ಲಿಸಿ ತಮಗಾಗಿರುವ ಅನ್ಯಾಯವನ್ನು ವಿವರಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪದವಿ, ಸ್ನಾತಕೋತ್ತರ ಪದವಿಗಳಿಗೆ ಈ ಹಿಂದೆ ಇದ್ದಂತೆ ಉಚಿತ ಪ್ರವೇಶಾತಿ ನೀಡಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ಮಹೇಶ್ ಸೋಸಲೆ, ನಟರಾಜ್ ಶಿವಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News