ರಾಜ್ಯದಲ್ಲಿ ಗುರುವಾರ 1,691 ಮಂದಿಗೆ ಕೊರೋನ ದೃಢ; ಆರು ಮಂದಿ ಮೃತ್ಯು

Update: 2022-08-11 17:58 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.11: ರಾಜ್ಯದಲ್ಲಿ ಗುರುವಾರ 1,691 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ಆರು ಜನರು ಮೃತಪಟ್ಟಿದ್ದು, 1,982 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 40,26,085ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,134ಕ್ಕೆ ತಲುಪಿದೆ.        
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 10,054ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.  

ಆರು ಜನರ ಸಾವು: ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ ಆರು ಜನರು ಮೃತಪಟ್ಟಿದ್ದು, ಬಳ್ಳಾರಿ 1, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 1, ಧಾರವಾಡ 1, ಕೊಪ್ಪಳ 1, ವಿಜಯಪುರ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ.  

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 1,691 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 6, ಬಳ್ಳಾರಿ 58, ಬೆಳಗಾವಿ 29, ಬೆಂಗಳೂರು ಗ್ರಾಮಾಂತರ 11, ಬೆಂಗಳೂರುನಗರ 1225, ಬೀದರ್ 2, ಚಾಮರಾಜನಗರ 27, ಚಿಕ್ಕಬಳ್ಳಾಪುರ 12, ಚಿಕ್ಕಮಗಳೂರು 19, ಚಿತ್ರದುರ್ಗ 4, ದಕ್ಷಿಣಕನ್ನಡ 6, ದಾವಣಗೆರೆ 19, ಧಾರವಾಡ 42, ಗದಗ 2, ಹಾಸನ 14, ಹಾವೇರಿ 10, ಕಲಬುರಗಿ 15, ಕೊಡಗು 7, ಕೋಲಾರ 7, ಕೊಪ್ಪಳ 3, ಮಂಡ್ಯ 24, ಮೈಸೂರು 88, ರಾಯಚೂರು 9, ರಾಮನಗರ 5, ಶಿವಮೊಗ್ಗ 22, ತುಮಕೂರು 7, ಉಡುಪಿ 8, ಉತ್ತರಕನ್ನಡ 7, ವಿಜಯಪುರ ಜಿಲ್ಲೆಯಲ್ಲಿ 3 ಪ್ರಕರಣ ಪತ್ತೆಯಾಗಿವೆ. 
 
ರಾಜಧಾನಿಯಲ್ಲಿ 1,225 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ಗುರುವಾರದಂದು 1,225  ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 1,229 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 18,48,847   ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,978 ಜನರು ಸೋಂಕಿಗೆ ಬಲಿಯಾಗಿದ್ದಾರೆ. 

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News