ರಾಷ್ಟ್ರಧ್ವಜಕ್ಕೆ ಅಪಮಾನ ಆರೋಪ: ​ಶಿಕ್ಷಣ ಸಚಿವ ಬಿ.ಸಿ ನಾಗೇಶ್ ವಿರುದ್ಧ ದೂರು

Update: 2022-08-12 05:40 GMT

ತುಮಕೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್‌ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜ ಹಿಡಿದು ರಾಷ್ಟ್ರಕ್ಕೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಘಟಕವು ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದೆ.

ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಶಿಕ್ಷಣ ಸಚಿವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರಿನಲ್ಲಿ ಕೋರಲಾಗಿದೆ. 

ಸಿಪಿಐ(ಎಂಎಲ್)ರೆಡ್ ಸ್ಟಾರ್ ನಿಂದ ದೂರು

ಸಚಿವರು ತಿಪಟೂರಿನಲ್ಲಿ ಬುಧವಾರ ಶಾಲಾ ಸಿಬ್ಬಂದಿವರ್ಗ ಹಾಗೂ ಮಕ್ಕಳನ್ನು ಬಳಸಿಕೊಂಡು ತ್ರಿವರ್ಣಧ್ವಜ ಅಂದರೆ, ರಾಷ್ಟ್ರಧ್ವಜದ ಮೇಲೆ ಎಬಿವಿಪಿ ಧ್ವಜವನ್ನು ಹಾರಿಸಿ ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ . ಇದು ರಾಷ್ಟ್ರದ್ರೋಹಕ್ಕೆ ಸಮನಾದ ಅಪರಾಧವಾಗಿರುತ್ತದೆ, ಶಾಲಾ ಮಕ್ಕಳನ್ನು ಇಂತಹ ಚಟುವಟಿಕೆಗಳಿಗೆ ಬಳಸಿಕೊಂಡಿರುವುದು ದುರ್ದೈವದ ಸಂಗತಿಯಾಗಿದೆ ಎಂದು ಸಿಂಧನೂರು ಪೊಲೀಸ್ ಠಾಣೆಗೆ ಸಿಪಿಐ(ಎಂಎಲ್)ರೆಡ್ ಸ್ಟಾರ್ ಸಿಂಧನೂರು ಘಟಕ ದೂರು ಸಲ್ಲಿಸಿದೆ.

ಈ  ಬಗ್ಗೆ ಸೂಕ್ತ ತನಿಖೆ ನಡೆಸಿ , ಧ್ವಜ ಸಂಹಿತೆ ಮತ್ತು ರಾಷ್ಟ್ರದ್ರೋಹದ ಅಡಿ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು  ದೂರಿನಲ್ಲಿ ಮನವಿ ಮಾಡಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News