ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ದಿಲ್ಲಿಯಲ್ಲಿ 2,000 ಕಾಟ್ರಿಡ್ಜ್‌ಗಳು ಪತ್ತೆ, 6 ಮಂದಿ ಬಂಧನ

Update: 2022-08-12 07:02 GMT
Photo:PTI

ಹೊಸದಿಲ್ಲಿ: ಸ್ವಾತಂತ್ರ್ಯ ದಿನಾಚರಣೆಗೆ (Independence Day)ಮುನ್ನ ದಿಲ್ಲಿಯಲ್ಲಿ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಆರು ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತರಿಂದ 2,000 ಜೀವಂತ ಕಾಟ್ರಿಡ್ಜ್‌ಗಳು ಸೇರಿದಂತೆ ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳನ್ನು ರಾಷ್ಟ್ರ ರಾಜಧಾನಿಯ ಆನಂದ್ ವಿಹಾರ್‌ನಲ್ಲಿ ಎರಡು ಚೀಲಗಳ ಕಾಟ್ರಿಡ್ಜ್‌ಗಳೊಂದಿಗೆ ಬಂಧಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಗಸ್ಟ್ 15 ರಂದು ಭಾರತ ಸ್ವಾತಂತ್ರ್ಯ ದಿನಾಚರಣೆಗೆ ಸಜ್ಜಾಗುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News