ವೆಂಟಿಲೇಟರ್ ನಲ್ಲಿರುವ ಕಾಮಿಡಿಯನ್ ರಾಜು ಶ್ರೀವಾಸ್ತವ ಅವರ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

Update: 2022-08-12 08:14 GMT
Photo:twitter

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕಾಮಿಡಿಯನ್ ಹಾಗೂ  ಉತ್ತರ ಪ್ರದೇಶ ಚಲನಚಿತ್ರ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ರಾಜು ಶ್ರೀವಾಸ್ತವ್ ಅವರ ಪತ್ನಿಗೆ ಕರೆ ಮಾಡಿ ರಾಜು ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ ಹಾಗೂ  ಬೆಂಬಲವನ್ನು ನೀಡಿದ್ದಾರೆ ಎಂದು ಶ್ರೀವಾಸ್ತವ ಅವರ ಕುಟುಂಬದ ಮೂಲಗಳು ತಿಳಿಸಿವೆ.

ಕಾಮಿಡಿಯನ್  ಇನ್ನೂ ವೆಂಟಿಲೇಟರ್‌ನಲ್ಲಿದ್ದಾರೆ ಹಾಗೂ  ಅವರ ಸ್ಥಿತಿ ಇನ್ನೂ ಸುಧಾರಿಸಿಲ್ಲ. ಏಮ್ಸ್ ನ ಹಿರಿಯ ವೈದ್ಯರ ಮೇಲ್ವಿಚಾರಣೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ 46 ಗಂಟೆಗಳಿಂದ ಶ್ರೀವಾಸ್ತವ ಅವರಿಗೆ ಪ್ರಜ್ಞೆ ಬಂದಿಲ್ಲ.

ಬುಧವಾರ ಹೃದಯಾಘಾತದ ನಂತರ  58 ವರ್ಷದ ಸ್ಟ್ಯಾಂಡ್-ಅಪ್ ಕಾಮಿಡಿಯನ್ ರಾಜು ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.  ಅಲ್ಲಿ ಅವರು ಆ್ಯಂಜಿಯೋಪ್ಲ್ಯಾಸ್ಟಿಗೆ ಒಳಗಾಗಿದ್ದರು.

"ಅವರು ಗಂಭೀರವಾಗಿದ್ದಾರೆ ಹಾಗೂ  ಐಸಿಯುನಲ್ಲಿ ವೆಂಟಿಲೇಟರ್‌ನಲ್ಲಿದ್ದಾರೆ" ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

1980 ರಿಂದ  ಮನರಂಜನಾ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ರಾಜು ಶ್ರೀವಾಸ್ತವ  2005 ರಲ್ಲಿ ಸ್ಟ್ಯಾಂಡ್-ಅಪ್ ಕಾಮಿಡಿ ಶೋ "ದಿ ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೆಂಜ್" ನ ಮೊದಲ ಸೀಸನ್‌ನಲ್ಲಿ ಭಾಗವಹಿಸಿದ ನಂತರ ಜನ ಮನ್ನಣೆ ಪಡೆದರು.

ಅವರು "ಮೈನೆ ಪ್ಯಾರ್ ಕಿಯಾ", "ಬಾಝಿಗರ್", "ಬಾಂಬೆ ಟು ಗೋವಾ" (ರೀಮೇಕ್) ಮತ್ತು "ಆಮ್ದಾನಿ ಅಥಾನಿ ಖರ್ಚಾ ರುಪೈಯಾ" ಮುಂತಾದ ಹಿಂದಿ ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರು "ಬಿಗ್ ಬಾಸ್" ಸೀಸನ್ ಮೂರರಲ್ಲಿ ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News