ಪರೇಶ್ ಮೇಸ್ತಾ ಹತ್ಯೆ ಆರೋಪಿಗೆ ಜಿಲ್ಲಾ ವಕ್ಘ್ ಮಂಡಳಿ ಉಪಾಧ್ಯಕ್ಷ ಸ್ಥಾನ; ವಿರೋಧದ ಬಳಿಕ ಆದೇಶಕ್ಕೆ ತಡೆ

Update: 2022-08-12 12:02 GMT
(ಪರೇಶ್ ಮೇಸ್ತಾ)

ಬೆಂಗಳೂರು: ಸಂಘಪರಿವಾರ ಕಾರ್ಯಕರ್ತ ಪರೇಶ್ ಮೇಸ್ತಾ ಹತ್ಯೆ ಆರೋಪಿಯನ್ನು ಜಿಲ್ಲಾ ವಕ್ಘ್ ಮಂಡಳಿಯ ಉಪಾಧ್ಯಕ್ಷನಾಗಿ ಆಯ್ಕೆ ಮಾಡಿದ್ದು, ಬಿಜೆಪಿ ಹಾಗೂ ಸಂಘಪರಿವಾರದ ಕಾರ್ಯಕರ್ತರಿಂದ ಆಕ್ರೋಶ ವ್ಯಕ್ತವಾಗಿತ್ತು. 

ಇದೀಗ ಆಕ್ರೋಶಕ್ಕೆ ಮಣಿದು ರಾಜ್ಯ ವಕ್ಫ್​​​ ಮಂಡಳಿ ಉತ್ತರ ಕನ್ನಡ ಜಿಲ್ಲಾ ಸಮಿತಿ ರಚನಾ ಆದೇಶವನ್ನೇ ತಡೆಹಿಡಿದಿದೆ. 

ಪರೇಶ್ ಮೆಸ್ತಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಆಜಾದಿ ಅಣ್ಣಿಗೇರಿಗೆ ಉತ್ತರ ಕನ್ನಡ ಜಿಲ್ಲಾ ಉಪಾಧ್ಯಕ್ಷ ಸ್ಥಾನ ನೀಡಲಾಗಿತ್ತು.

'ಸಾರ್ವಜನಿಕರಿಂದ ದೂರು ಬಂದಿರುವ ಹಿನ್ನೆಲೆಯಲ್ಲಿ ಆದೇಶವನ್ನು ತಡೆಹಿಡಿದಿದ್ದು, ಮುಂದಿನ ಆದೇಶದವರೆಗೂ ತನ್ನ ಆದೇಶವನ್ನು ತಡೆ ಹಿಡಿಯಲಾಗಿದೆ ಎಂದು ಕರ್ನಾಟಕ ರಾಜ್ಯ ವಕ್ಫ್​​ ಮಂಡಳಿ ತಿಳಿಸಿದೆ. 

2017ರಲ್ಲಿ ನಡೆದ  ಪರೇಶ್ ಮೇಸ್ತಾ ಹತ್ಯೆ ಪ್ರಕರಣ ಇಡೀ ರಾಜ್ಯದಲ್ಲೇ ಭಾರೀ ಚರ್ಚೆಗೆ ಕಾರಣವಾಗಿತ್ತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News