×
Ad

ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

Update: 2022-08-12 20:46 IST
ಅರುಣ್ ಸಿಂಗ್

ಹೊಸದಿಲ್ಲಿ, ಆ.12: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಬಸವರಾಜ ಬೊಮ್ಮಾಯಿ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

ಶುಕ್ರವಾರ ಹೊಸದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು, ಯುವಕರ ಪರವಾಗಿ ಬಸವರಾಜ ಬೊಮ್ಮಾಯಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರೊಬ್ಬ ಕಾಮನ್ ಮ್ಯಾನ್ ಸಿಎಂ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೆ ಮುಂದಿನ ಚುನಾವಣೆ ಎದುರಿಸುತ್ತೇವೆ. 150 ಕ್ಷೇತ್ರಗಳಲ್ಲಿ ಗೆದ್ದು ಪೂರ್ಣ ಪ್ರಮಾಣದಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬರಲಿದ್ದೇವೆ. ಕಾಂಗ್ರೆಸ್ ಗೊಂದಲ ಹುಟ್ಟು ಹಾಕುತ್ತಿದೆ. ಸಿಎಂ ಬದಲಾವಣೆ ಎನ್ನುವುದು ಕಾಂಗ್ರೆಸ್ ಷಡ್ಯಂತ್ರ ಎಂದು ಅವರು ದೂರಿದರು.

ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಒಡಕಿದೆ. ಅದನ್ನು ಮುಚ್ಚಿ ಹಾಕಲು ಸಿಎಂ ಬದಲಾವಣೆ ವಿಚಾರ ಹುಟ್ಟು ಹಾಕಿದ್ದಾರೆ. ಕಾಂಗ್ರೆಸ್ ನಾಯಕರೇ ಇಲ್ಲದ ಪಕ್ಷ. ಸಿಎಂ ಬದಲಾವಣೆ ವಿಚಾರದಲ್ಲಿ ಯಾವುದೇ ಸತ್ಯ ಇಲ್ಲ ಎಂದು ಅರುಣ್ ಸಿಂಗ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News