ಸಿಎಂ ಬದಲಾವಣೆ ಬಗ್ಗೆ ಮಾತನಾಡಲು ಸುರೇಶ್ ಗೌಡ ಯಾರು?: ಸಚಿವ ಮಾಧುಸ್ವಾಮಿ

Update: 2022-08-12 15:22 GMT

ಬೆಂಗಳೂರು: ‘ಸಿಎಂ ಬದಲಾವಣೆ ಬಗ್ಗೆ ಮಾತನಾಡಲು ಸುರೇಶ್ ಗೌಡ ಯಾರು? ಪ್ರಧಾನಿ ಮೋದಿ ಅಥವಾ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರೆ ಉತ್ತರ ನೀಡಬಹುದು. ಬದಲಾವಣೆ ಮಾಡುವಂತಹ ವ್ಯಕ್ತಿ ಹೇಳಿಕೆ ನೀಡಿದ್ದರೆ ಪ್ರತಿಕ್ರಿಯೆ ನೀಡಬಹುದಿತ್ತು'' ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ. 

ಶುಕ್ರವಾರ ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಾಧುಸ್ವಾಮಿ, ' ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಏನು ನಡೆದಿದೆ ಎಂದು ನಾನು ಹೇಳಲು ಸಾಧ್ಯವಿಲ್ಲ. ನಮ್ಮ ಅವಧಿಯಲ್ಲಿ ನಾವು ಏನು ಮಾಡುತ್ತಿದ್ದೇವೆ ಮತ್ತು ಯಾವ ಉದ್ದೇಶಕ್ಕಾಗಿ ಪ್ರಕರಣಗಳನ್ನು ಹಿಂಪಡೆಯುತ್ತಿದ್ದೇವೆ ಎಂದು ಹೇಳಬಹುದು. ಹಿಂದಿನ ಅವಧಿಯಲ್ಲಿ ಏನು ನಡೆದಿದೆ ಎಂಬುದು ನನಗೆ ಗೊತ್ತಿಲ್ಲ. ನಮ್ಮ ಅವಧಿಯಲ್ಲಿ ಸಾರ್ವಜನಿಕರ ದೃಷ್ಟಿಯಿಂದ ಪ್ರಕರಣಗಳನ್ನು ವಾಪಸ್ ಪಡೆದುಕೊಳ್ಳುತ್ತಿದ್ದೇವೆ' ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ:  30ಕ್ಕೂ ಹೆಚ್ಚು ಪ್ರಕರಣಗಳನ್ನು ಹಿಂಪಡೆಯಲು ಸಚಿವ ಸಂಪುಟ ನಿರ್ಧಾರ: ಸಚಿವ ಮಾಧುಸ್ವಾಮಿ

''ಕಾನೂನು ಇಲಾಖೆ ಮಾಹಿತಿಯನ್ನು ಆಧರಿಸಿ, ಗಂಭೀರ ಸ್ವರೂಪದ ಪ್ರಕರಣಗಳನ್ನು ಹೊರತುಪಡಿಸಿ ಇನ್ನಿತರ ಪ್ರಕರಣಗಳನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಚರ್ಚಿಸಿ, ಕೇಸುಗಳನ್ನು ಹಿಂಪಡೆದುಕೊಳ್ಳಲಾಗುವುದು' ಎಂದ ಅವರು, ಪೊಲೀಸರು ಯಾರು ಕಾಂಗ್ರೆಸ್, ಯಾರು ಬಿಜೆಪಿ ಎಂದು ಹೇಳಲು ಸಾಧ್ಯವಿಲ್ಲ. ಎಲ್ಲವನ್ನು ಪರಿಶೀಲಿಸಿ ಕೇಸುಗಳನ್ನು ವಾಪಸ್ ಪಡೆದುಕೊಳ್ಳಲಾಗುವುದು'' ಎಂದು ವಿವರಿಸಿದರು.

ಇದನ್ನೂ ಓದಿ:  ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸಾಧ್ಯತೆ: ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News