ಲಂಚ ಪ್ರಕರಣ: IAS ಅಧಿಕಾರಿ ಮಂಜುನಾಥ್ ಜಾಮೀನು ಕೋರಿ ಸುಪ್ರೀಂಕೋರ್ಟ್‍ಗೆ ಅರ್ಜಿ

Update: 2022-08-12 15:46 GMT

ಬೆಂಗಳೂರು, ಆ.12: ಲಂಚ ಸ್ವೀಕಾರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬೆಂಗಳೂರು ನಗರದ ಹಿಂದಿನ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಜಾಮೀನು ಕೋರಿ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ.  

ಇತ್ತೀಚೆಗೆ ಕರ್ನಾಟಕ ಹೈಕೋರ್ಟ್ ನ್ಯಾಯಪೀಠವು ಐಎಎಸ್ ಅಧಿಕಾರಿ ಮಂಜುನಾಥ್ ಅವರಿಗೆ ಜಾಮೀನು ನೀಡಲು ನಿರಾಕರಿಸಿದ ಬೆನ್ನಲ್ಲೇ ಇವರು ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ. 

ಸುಪ್ರೀಂಕೋರ್ಟ್‍ನಲ್ಲಿ ಜಾಮೀನು ಕೋರಿ ನೂಲಿ ಮತ್ತು ನೂಲಿ ಸಂಸ್ಥೆಯ ಮೂಲಕ ಸಲ್ಲಿಸಲಾಗಿರುವ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಜಾಮೀನು ನೀಡಲು ನಿರಾಕರಿಸಿರುವ ಹೈಕೋರ್ಟ್ ಆದೇಶ ಮತ್ತು ಎಸಿಬಿ ದಾಖಲಿಸಿರುವ ಎಫ್‍ಐಆರ್‍ಗೆ ತಡೆ ನೀಡಬೇಕೆಂದು ಅರ್ಜಿ ಸಲ್ಲಿಸಲಾಗಿದೆ. 

ಆನೇಕಲ್ ವ್ಯಾಪ್ತಿಯ ಕೂಡ್ಲು ಗ್ರಾಮದ 38 ಗುಂಟೆ ಜಮೀನು ಒಡೆತನಕ್ಕೆ ಸಂಬಂಧಿಸಿದಂತೆ ಅನುಕೂಲಕರ ಆದೇಶ ಮಾಡಲು ಅಜಂ ಪಾμÁ ಎಂಬುವರಿಂದ ಐದು ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಬೆಂಗಳೂರು ಡಿಸಿ ಕಚೇರಿಯಲ್ಲಿ ಉಪ ತಹಶೀಲ್ದಾರ್ ಆಗಿದ್ದ ಪಿ.ಎಸ್.ಮಹೇಶ್ ಮತ್ತು ನ್ಯಾಯಾಲಯ ವಿಭಾಗದ ಸಹಾಯಕ ಚೇತನ್ ಕುಮಾರ್ ಅವರನ್ನು ಮೇ 21ರಂದು ಎಸಿಬಿ ಬಂಧಿಸಿತ್ತು. ಈ ಪ್ರಕರಣದಲ್ಲಿ ಮಂಜುನಾಥ್ 3ನೆ ಆರೋಪಿಯಾಗಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News