ಪೊಲಿಪುವಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಹಾನಿ

Update: 2022-08-12 16:07 GMT
ಸಾಂದರ್ಭಿಕ ಚಿತ್ರ

ಕಾಪು : ಪೊಲಿಪು ಸರ್ಕಲ್ ಬಳಿಯ ಮನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯ ಸೊತ್ತುಗಳು ಹಾನಿಗೊಂಡ ಘಟನೆ ಶುಕ್ರವಾರ ಸಂಭವಿಸಿದೆ.

ಗುರುರಾಜ್ ಅವರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿದ ಬಳಿಕ ಪೇಟೆಗೆ ಸಾಮಾನು ಖರೀದಿಸಲು ತೆರಳಿದ್ದರು. ಆ ಸಂದರ್ಭ ಶಾರ್ಟ್ ಸರ್ಕ್ಯೂಟ್‌ ಸಂಭವಿಸಿದ್ದು, ಮನೆಯ ಬಟ್ಟೆ ಬರೆ ಸಹಿತ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ.  ಇದರಿಂದ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಸ್ಥಳೀಯರು ಹಾಗೂ ಉಡುಪಿ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ಹತೋಟಿಗೆ ತಂದಿದ್ದಾರೆ.  ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News